ಮಾ.1ರಿಂದ ಸರ್ಕಾರಿ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ: ಗೈರು ಹಾಜರಾಗಿ ಮುಷ್ಕರದಲ್ಲಿ ಪಾಲ್ಗೊಳ್ಳಲು ಜಿಲ್ಲಾಧ್ಯಕ್ಷ ಪಾಲಾಕ್ಷಿ ಕರೆ

ಮಾ.1ರಿಂದ ಸರ್ಕಾರಿ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ
ದಾವಣಗೆರೆ: ಬರುವ ಮಾರ್ಚ್ 1ರಂದು ಕರೆ ನೀಡಲಾಗಿರುವ ರಾಜ್ಯ ಸರ್ಕಾರಿ ನೌಕರರ ಅನಿರ್ದಿಷ್ಠಾವಧಿ ಮುಷ್ಕರದಲ್ಲಿ ಜಿಲ್ಲೆಯ ಸರ್ಕಾರಿ ನೌಕರರು ಗೈರು ಹಾಜರಾಗುವ ಮೂಲಕ ಮುಷ್ಕರದಲ್ಲಿ ಪಾಲ್ಗೊಂಡು ಬೆಂಬಲಿಸುವಂತೆ ಜಿಲ್ಲಾಧ್ಯಕ್ಷ ಬಿ.ಪಾಲಾಕ್ಷಿ ಸರ್ಕಾರಿ ನೌಕರರಲ್ಲಿ ಮನವಿ ಮಾಡಿದ್ದಾರೆ.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆ ಪರಿಷ್ಕರಣೆ ಹಾಗೂ ಹಳೆ ಪಿಂಚಣಿ ಯೋಜನೆಗಳನ್ನು ಜಾರಿಗೊಳಿಸಲು ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಇದೇ ಮಾ.1ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ ಎಂದು ಹೇಳಿದರು.
ಕಳೆದ ಆಯ-ವ್ಯಯದಲ್ಲಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ಪ್ರಸ್ತಾಪ ಮಾಡದಿರುವುದ ನೌಕರರಲ್ಲಿ ನಿರಾಶೆ ಮೂಡಿಸಿದೆ ಎಂದವರು ಹೇಳಿದರು. ಈ ಹಿನ್ನೆಲೆಯಲ್ಲಿ ಕಳೆದ ಫೆ.21ರಂದು ಜರುಗಿದ ತುರ್ತು ಕಾರ್ಯಕಾರಿಣಿ ಸಭೆಯಲ್ಲಿ 8 ಸಾವಿರ ಚುನಾಯಿತ ಪ್ರತಿನಿಧಿಗಳ ಸಮ್ಮುಖದಲ್ಲಿ ಸರ್ವಾನುಮತದಿಂದ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಹೇಳಿದರು.
ನೌಕರರಿಗೆ 2022ರ ಜುಲೈ 1ರಿಂದ ಪರಿಷ್ಕೃತ ವೇದನ, ಭತ್ಯೆಗಳಿಗೆ ಅರ್ಹರಾಗಿದ್ದು, ಚುನಾವಣೆ ನೀತಿ ಸಂಹಿತೆ ಜಾರಿಗೆ ಮೊದಲು ಶೇ.40ರಷ್ಟು ಫಿಟ್ ಮೆಂಟ್ ಸೌಲಭ್ಯವನ್ನು ಅಂದಿನಿಂದಲೇ ಜಾರಿಗೆ ಬರುವಂತೆ ಆದೇಶಿಸಬೇಕು. ಬೇರೆ ರಾಜ್ಯಗಳ ಮಾದಿಯಲ್ಲಿ ರಾಜ್ಯದಲ್ಲೂ ಸಹ ಎನ್‌ಪಿಎಸ್ ಯೋಜನೆ ರದ್ಧುಪಡಿಸಿ ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಲು ಆಗ್ರಹಿಸಿ ರಾಜ್ಯದ ಎಲ್ಲಾ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಬೆಂಬಲಿಸುವಂತೆ ಅವರು ಮನವಿ ಮಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಖಜಾಂಚಿ ಬಿ.ಆರ್. ತಿಪ್ಪೇಸ್ವಾಮಿ, ಜಿಲ್ಲಾ ಕಾರ್ಯದರ್ಶಿ ಸಿ.ಗುರುಮೂರ್ತಿ, ಡಿ.ರಾಮಪ್ಪ, ಬಿ.ಕೆ. ರೇಣುಕಾಮೂರ್ತಿ. ಹೆಚ್.ರಂಗಸ್ವಾಮಿ, ಎನ್.ಎಂ. ಕರಿಬಸಪ್ಪ, ಮುಬಾರಕ್ ಅಲಿ, ಶಿವಾನಂದ ದಳವಾಯಿ, ಡಿ.ಡಿ. ಹಾಲಪ್ಪ, ಡಾ.ಮುರಳಿ, ಲೋಹಿತ್ ಕುಮಾರ್, ರಾಜು, ಸಿದ್ದೇಶ್, ಸಂಗಮೇಶ್, ಗೋವಿಂದಪ್ಪ, ಕೆ.ಎಂ. ವಿಶ್ವನಾಥ್ ಇತರರು ಉಪಸ್ಥಿತರಿದ್ದರು.