ವರದಿಗಾರರ ಕೂಟದಲ್ಲಿ ಸ್ವಾತಂತ್ರ್ಯ ದಿನಾಚರಣೆ

ದಾವಣಗೆರೆ: ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಲ್ಲಿ 75 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಕೂಟದ ನಿಕಟಪೂರ್ವ ಅಧ್ಯಕ್ಷ ಬಸವರಾಜ್ ದೊಡ್ಡಮನಿ ರಾಷ್ಟ್ರ ಧ್ವಜರೋಹಣ ನೆರವೇರಿಸಿದರು.
ಇದೇ ವೇಳೆ ಕೂಟದ ಅಧ್ಯಕ್ಷ ಜಿ.ಎಂ.ಆರ್. ಆರಾಧ್ಯ, ಸಂಸ್ಥಾಪಕ ಅಧ್ಯಕ್ಷ ಕೆ.ಏಕಾಂತಪ್ಪ ಅವರು ಸ್ವಾತಂತ್ರ್ಯದಿನದ ಕುರಿತು ಮಾತನಾಡಿದರು.
ಈ ಸಂದರ್ಭದಲ್ಲಿ ವರದಿಗಾರರ ಕೂಟದ ಪ್ರಧಾನ ಕಾರ್ಯದರ್ಶಿ ಮಂಜುನಾಥ ಕಾಡಜ್ಜಿ, ತಾರಾನಾಥ್, ನಂದ ಕುಮಾರ್, ವರದರಾಜ್, ಕಿರಣ್, ಪುನೀತ್, ವರದರಾಜ್, ಸತೀಶ್, ನೂರ್ ಉಲ್ಲಾ, ವೀರೇಶ್, ನಿಂಗಪ್ಪ, ಮಹಾದೇವ್, ಯೋಗೇಶ್, ಶೀಲವಂತ್, ಭಾಸ್ಕರ್, ಪ್ರಕಾಶ್ ಇನ್ನಿತರರು ಉಪಸ್ಥಿತರಿದ್ದರು.