ಚಿತ್ರಕಲಾ ಪರಿಷತ್ತಿನಲ್ಲಿ ಇಂದಿನಿಂದ ಇಂಡಿಯನ್ ಆರ್ಟಿಸನ್ ಬಜಾರ್ ! ಕೋವಿಡ್ ಮುನ್ನೆಚ್ಚರಿಕೆ ನಡುವೆಯೂ ಕಲೆಗಳ ಅನಾವರಣಾ
ಬೆಂಗಳೂರು : ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಆಯೋಜಿಸಲಾಗಿರುವ ದೇಶದ ವಿವಿಧ ಭಾಗಗಳ ಕಲಾವಿದರ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ ಇಂಡಿಯನ್ ಆರ್ಟಿಸನ್ ಬಜಾರ್ ಅನ್ನು ಇಂದು ನಟಿಯರಾದ ಗ್ರೀಷ್ಮಾ ಗೌಡ ಮತ್ತು ನಂದಿನಿ ಶಂಕರ್ ಉದ್ಘಾಟಿಸಿದರು. ನಂತರ ಮಾತನಾಡಿದ ಗ್ರೀಷ್ಮಾ ಗೌಡ, “ನಾನು ಇಲ್ಲಿಗೆ ಮೊದಲ ಬಾರಿಗೆ ಬರುತ್ತಿದ್ದೇನೆ. ಎಲ್ಲಾ ಕಲಾತ್ಮಕ ವರ್ಷಗಳು ತುಂಬಾ ವರ್ಣಮಯವಾಗಿದೆ. ಉತ್ಪಾದಕರಿಂದ ನೇರವಾಗಿ ಮಾರುಕಟ್ಟೆ ತಲುಪುವುದರಿಂದ ಗುಣಮಟ್ಟದ ಬಗ್ಗೆ ಅನುಮಾನವೇ ಬೇಡ. ಜನರು ಹೆಚ್ಚಾಗಿ ಬಂದು ಇದನ್ನು ವೀಕ್ಷಿಸಿ ಖರೀದಿಸಿದರೆ ಕಲಾವಿದರಿಗೆ ತುಂಬಾ ಸಹಾಯವಾಗುತ್ತದೆ ಎಂದರು.
ನಟಿ ನಂದಿನಿ ಶಂಕರ್ ಮಾತನಾಡಿ, ಇಲ್ಲಿನ ಪ್ರತಿಯೊಂದೂ ವಸ್ತುಗಳು ತುಂಬಾ ಚೆನ್ನಾಗಿದೆ. ಇದು ಎಲ್ಲಾ ಹೆಣ್ಣುಮಕ್ಕಳಿಗೂ ಇಷ್ಟವಾಗುವ ಜಾಗ. ಇಲ್ಲಿ ತುಂಬಾ ಕಡಿಮೆ ದರದಲ್ಲಿ ಹೆಚ್ಚು ಸಂಗ್ರಹಗಳಿವೆ. ನಾನು ಕೂಡ ಇಲ್ಲಿನ ಆಭರಣಗಳನ್ನು ಖರೀದಿಸಿದ್ದೇನೆ. ಜೂನ್ 13ರವರೆಗೆ ಈ ಪ್ರದರ್ಶನ ನಡೆಯಲಿದ್ದು, ಬೆಂಗಳೂರಿಗರು ಇದರ ಲಾಭ ಪಡೆಯಬೇಕುಎಂದು ಮನವಿ ಮಾಡಿದರು.
ಕರ್ನಾಟಕ ಚಿತ್ರಕಲಾ ಪರಿಷತ್ ಆವರಣದಲ್ಲಿ ಬೆಳಿಗ್ಗೆ 11 ರಿಂದ ಸಂಜೆ 7 ಗಂಟೆಯವರೆಗೆ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಲಾಗಿದ್ದು, ಪ್ರವೇಶ ಉಚಿತವಾಗಿದೆ. 80 ಕ್ಕೂ ಹೆಚ್ಚು ಅಂಗಡಿಗಳಿದ್ದು ದೇಶದ ಎಲ್ಲಾ ಭಾಗಗಳಿಂದ ಆಗಮಿಸಿರುವ ಕಲಾವಿದರುಗಳು ತಮ್ಮ ಕಲೆಯನ್ನು ಪ್ರದರ್ಶಿಸುತ್ತಿದ್ದಾರೆ. ದೇಶದ ವಿವಿಧ ಮೂಲೆಗಳ ಕಲಾವಿದರ ಕಲಾಕೃತಿಗಳು ಹಾಗೂ ಉತ್ಪನ್ನಗಳು ನೇರವಾಗಿ ಜನರಿಗೆ ತಲುಪಲಿವೆ. ನಿಮ್ಮ ಮನೆಯ ಗಾರ್ಡನ್ ಅಲಂಕರಿಸಲು, ನಿಮಗೊಪ್ಪುವ ಹ್ಯಾಂಡ್ ಲೂಮ್ ಸ್ಯಾರಿಯನ್ನು ಸೆಲೆಕ್ಟ್ ಮಾಡಲು, ಕುರ್ತಿಗಳು ಮತ್ತು ಆಭರಣಗಳನ್ನು ಕೊಳ್ಳಲು ಅತ್ಯುತ್ತಮ ಮೇಳ ಇದಾಗಿದೆ.
ಈ ಮೇಳದಲ್ಲಿ ದೇಶದ ವಿವಿಧ ಭಾಗಗಳ ಕರಕುಶಲಕಾರರು ತಯಾರಿಸಿದ ತರಹೇವಾರಿ ಕರಕುಶಲ ವಸ್ತುಗಳು, ಆಟಿಕೆಗಳು, ಉಡುಪುಗಳು ಸೇರಿದಂತೆ ರಾಜಧಾನಿ ಬೆಂಗಳೂರಿನ ಜನತೆಗೆ ಮುದ ನೀಡುವಂತಹ ಉತ್ಪನ್ನಗಳು ಒಂದೇ ಸೂರಿನಡಿ ದೊರೆಯುತ್ತಿದೆ. ಮನೆಯನ್ನು ಅಲಂಕಾರ ಮಾಡುವ ಉತ್ಪನ್ನಗಳು, ಹ್ಯಾಂಡ್ಲೂಂಗಳು, ಕರಕುಶಲ ವಸ್ತುಗಳು, ಬಟ್ಟೆ, ಮರದ ಆಟಿಕೆಗಳು, ಹೆಂಗಳೆಯರ ಆಕರ್ಷಣೆಗೆಂದು ಆಭರಣಗಳು, ಬೆಡ್ ಲೈನೆನ್, ಕಲಾಕೃತಿಗಳು, ಪೀಠೋಪಕರಣಗಳು, ಮ್ಯಾಟ್ಗಳು, ಪಿಂಗಾಣಿ ವಸ್ತುಗಳು ಸೇರಿದಂತೆ ನೂರಾರು ಬಗೆಯ ಉತ್ಪನ್ನಗಳು ಈ ಪ್ರದರ್ಶನದಲ್ಲಿದೆ. ಈ ಮೇಳ ಇಂದಿನಿಂದ ಜೂನ್ 12 ರ ವರೆಗೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 96118 35597
garudavoice21@gmail.com 9740365719