ಪೊಲೀಸರಿಂದ ಇಂಡಿಯನ್ ಮನಿ ಫ್ರೀಡಂ ಕಂಪನಿ ಸಿಇಒ ಸುಧೀರ್ ವಿಚಾರಣೆ
ಬೆಂಗಳೂರು: ಇಂಡಿಯನ್ ಮನಿ ಫ್ರೀಡಂ ಕಂಪನಿ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಸಿ.ಎಸ್. ಸುಧೀರ್ ಅವರನ್ನು ಬನಶಂಕರಿ ಠಾಣೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಅರೆಕಾಲಿಕ ಕೆಲಸ ಕೊಡುವ ಆಮಿಷವೊಡ್ಡಿ ತಮ್ಮ ಆಪ್ ಪ್ರಚಾರಕ್ಕೆ ಬಳಸಿಕೊಂಡು ಹಣ ನೀಡದೇ ವಂಚಿಸಿರುವ ಆರೋಪದಡಿ ದೂರು ದಾಖಲಾದ ಹಿನ್ನೆಲೆಯನ್ನು ಪೊಲೀರು ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ.
ವಂಚನೆಗೀಡಾಗಿರುವ ಯುವತಿ ಸೇರಿ 21 ಮಂದಿ ಸುಧೀರ್ ಅವರ ವಿರುದ್ಧ ದೂರು ನೀಡಿದ್ದಾರೆ. ಅದರನ್ವಯ ಕಂಪನಿಯ ಸಂಸ್ಥಾಪಕರಾದ ಸುಧೀರ್ ಸೇರಿ 23 ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.
ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿಗಳಾದ ಸುಧೀರ್ ಹಾಗೂ ಇತರರು, ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದಾರೆ. ವಿಚಾರಣೆಗಾಗಿ ತನಿಖಾಧಿಕಾರಿ ಎದುರು ಹಾಜರಾಗುವಂತೆ ನ್ಯಾಯಾಲಯ ಷರತ್ತು ವಿಧಿಸಿದೆ ಎಂದು ತಿಳಿಸಿದರು.
ಪ್ರಕರಣ ಸಂಬಂಧ ತನಿಖೆ ಆರಂಭಸಲಾಗಿದೆ. ಹೀಗಾಗಿ, ವಿಚಾರಣೆಗೆ ಬರುವಂತೆ ಸುಧೀರ್ಗೆ ನೋಟಿಸ್ ನೀಡಲಾಗಿತ್ತು. ಅದರಂತೆ ಸುಧೀರ್ ಠಾಣೆಗೆ ಬಂದಿದ್ದಾರೆ. ವಿಚಾರಣೆ ಆರಂಭಿಸಲಾಗಿದೆ ಎಂದು ಹೇಳಿದರು.