ಕೈಗಾರಿಕೆ ಬೆಳವಣಿಗೆ ಅಭಿವೃದ್ಧಿಗೆ ಸಹಕಾರ ; ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ

 ದಾವಣಗೆರೆ; ಜಿಲ್ಲೆಯ ಕೈಗಾರಿಕಾ ಘಟಕಗಳ ಮೂಲಭೂತ ಸೌಕರ್ಯಗಳು, ಕೈಗಾರಿಕೋದ್ಯಮಿಗಳ ಕುಂದುಕೊರತೆ, ಕೈಗಾರಿಕಾ ಪ್ರದೇಶಕ್ಕೆ ಸಂಬಂಧಿಸಿದ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತದ ಸಹಕಾರ ಸದಾ ಇರುತ್ತದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ತಿಳಿಸಿದರು.

ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹೆಚ್.ಪಿ.ಸಿ ಎಕೋ ರಿಸೈಕ್ಲೀನರ್ ಘಟಕವು ನಗರದ ಘನ ತ್ಯಾಜ್ಯ ವಸ್ತುಗಳಾದ ಸಾವಯವ ತ್ಯಾಜ್ಯ, ಪ್ಲಾಸ್ಟಿಕ್, ಚಪ್ಪಲಿ ತ್ಯಾಜ್ಯ, ಗಾಜಿನ ಬಾಟಲಿಗಳಂತಹ ವಸ್ತುಗಳನ್ನು ಮರುಬಳಕೆಗೆ ಹೆಚ್ಚಿನ ಪ್ರಮಾಣದಲ್ಲಿ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.

ಲೋಕಿಕೆರೆ ರಸ್ತೆಯಲ್ಲಿರುವ ಕೆ.ಎಸ್.ಎಸ್.ಐ.ಡಿ.ಸಿ ಕೈಗಾರಿಕಾ ವಸಹಾತುವನ್ನು 2003ನೇ ಇಸವಿಯಲ್ಲಿ ನಗರಸಭೆಗೆ ಹಸ್ತಾಂತರಗೊಂಡಿರುತ್ತದೆ. ಅಂದಿನಿಂದಲೂ ನಗರ ಸಭೆ, ಮಹಾನಗರ ಪಾಲಿಕೆಗೆ ನಾವುಗಳು ಕಂದಾಯವನ್ನು ಪಾವತಿಸುತ್ತಾ ಬಂದಿರುತ್ತೇವೆ. ಹಸ್ತಾಂತರಗೊಂಡು 21 ವರ್ಷಗಳಾದರೂ ಸಹ ಮೂಲಭೂತ ಸೌಕರ್ಯಗಳಾದ ರಸ್ತೆ, ಬೀದಿ ದೀಪ, ಒಳಚರಂಡಿ, ಸಮಸ್ಯೆಗಳು ಬಗೆಹರಿದಿರುವುದಿಲ್ಲ ಎಂದು ಸಭೆಯಲ್ಲಿ ಕೈಗಾರಿಕೋದ್ಯಮಿಗಳು ಪ್ರಸ್ತಾಪಿಸಿದಾಗ ಇದಕ್ಕೆ ಸಂಬಂಧ ಪಟ್ಟ ಅಧಿಕಾರಿಗಳು ಮಾಹಿತಿ ಸಂಗ್ರಹಿಸಿ ಸೂಕ್ತ ಕ್ರಮವಹಿಸಲು ತಿಳಿಸಲಾಗುವುದು ಎಂದು ತಿಳಿಸಿದರು.

ಈ ಬಾರಿ ಪ್ರಾಸ್ತಾಪ ಆಗಿರುವ ಎಲ್ಲ ಸಮಸ್ಯೆಗಳಿಗೆ ಮುಂದಿನ ಸಭೆ ವೇಳೆಗೆ ಪರಿಹಾರ ಹುಡುಕಿಕೊಂಡು ಬರುವಂತೆ ಸೂಚಿಸಿದರು.
ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತಾರಾದ ರೇಣುಕಾ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕೃಷ್ಣನಾಯ್ಕ , ಸಂಘ, ಸಂಸ್ಥೆ ಪದಾಧಿಕಾರಿಗಳು, ಅಧಿಕಾರಿಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!