ಶಿವಮೊಗ್ಗ ವಾರ್ತಾ ಇಲಾಖೆಯಲ್ಲಿ ಪ.ಜಾ. ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಅಪ್ರೆಂಟಿಸ್‍ಶಿಪ್ ತರಬೇತಿಗೆ ಅರ್ಜಿ ಆಹ್ವಾನ

images (36)

ಶಿವಮೊಗ್ಗ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2021-22ನೇ ಸಾಲಿನ ಜಿಲ್ಲಾ ಕಚೇರಿಯಲ್ಲಿ ಕ್ಷೇತ್ರ ಪ್ರಚಾರ ಕಾರ್ಯಕ್ರಮ ಹಾಗೂ ಮಾಧ್ಯಮ ಚಟುವಟಿಕೆಗಳ ನಿರ್ವಹಣೆ ಕುರಿತು ತರಬೇತಿ ಪಡೆಯಲಿಚ್ಚಿಸುವ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ತರಬೇತಿ ಪಡೆಯಲಿಚ್ಚಿಸುವ ಅಭ್ಯರ್ಥಿಯು ಪತ್ರಿಕೋದ್ಯಮ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರಬೇಕು.
ಕನ್ನಡ, ಇಂಗ್ಲೀಷ್ ಭಾಷೆಯ ಓದು ಮತ್ತು ಬರಹ ಬಲ್ಲವರಾಗಿದ್ದು, ಕಂಪ್ಯೂಟರ್ ಜ್ಞಾನ ಹೊಂದಿದವರಾಗಿರಬೇಕು. 10 ತಿಂಗಳ ತರಬೇತಿ ಇದಾಗಿದ್ದು, ಪ.ಜಾ.ಯ ಇಬ್ಬರು ಅಭ್ಯರ್ಥಿಗಳನ್ನು ಮೆರಿಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 15 ಸಾವಿರ ರೂ.ಗಳ ಶಿಷ್ಯವೇತನ ನೀಡಲಾಗುವುದು. ಅಭ್ಯರ್ಥಿಗಳು ಶಿವಮೊಗ್ಗ ಜಿಲ್ಲೆಯವರಾಗಿರಬೇಕು. ಶಿವಮೊಗ್ಗ ಜಿಲ್ಲೆಯ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ನೆರೆಯ ಜಿಲ್ಲೆಯ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು. ಈ ಹಿಂದೆ ಅರ್ಜಿ ಸಲ್ಲಿಸಿ, ಆಯ್ಕೆಯಾಗಿ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಅವಕಾಶವಿರುವುದಿಲ್ಲ.
ಅರ್ಹರು ತಮ್ಮ ಸ್ವವಿವರ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು 02/11/2021 ರೊಳಗಾಗಿ ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸರ್.ಎಂ.ವಿ.ರಸ್ತೆ, ಶಿವಮೊಗ್ಗ-577201 ವಿಳಾಸಕ್ಕೆ ಸಲ್ಲಿಸಬಹುದಾಗಿದೆ.

Leave a Reply

Your email address will not be published. Required fields are marked *

error: Content is protected !!