ಮಾಹಿತಿ, ಶಿಕ್ಷಣ ಮತ್ತು ಸಂವಹನ ಅಭಿಯಾನ

ಶಿಕ್ಷಣ ಮತ್ತು ಸಂವಹನ ಅಭಿಯಾನ
ದಾವಣಗೆರೆ : ಫೆಬ್ರವರಿ 17 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಡಳಿತದ ತುಂಗಭದ್ರ ಸಭಾಂಗಣದಲ್ಲಿ ವಿದೇಶಗಳಲ್ಲಿ ಕೆಲಸ ಮಾಡಲು ಆಸಕ್ತವಿರುವ ಉದ್ಯೋಗಾಕಾಂಕ್ಷಿಗಳ ನೇಮಕಾತಿಗಾಗಿ ಮಾಹಿತಿ, ಶಿಕ್ಷಣ ಮತ್ತು ಸಂವಹನ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಅಂತರಾಷ್ಟ್ರೀಯ ವಲಸೆ ಕೇಂದ್ರ-ಕರ್ನಾಟಕ (ಐ.ಎಂ.ಸಿ-ಕೆ) ಯೋಜನೆಯಡಿ ಪ್ರಾರಂಭಿಸಿದ ವಲಸೆ ಮಾಹಿತಿ ಕೇಂದ್ರದಿಂದ ನೇಮಕಾತಿಯ ಅಭಿಯಾನವು ವಿದೇಶಗಳಲ್ಲಿ ಹೆಚ್ಚಿನ ಉದ್ಯೋಗಗಳನ್ನು ಕಲ್ಪಿಸಿಕೊಡುವ ವೃತ್ತಿಗಳಾದ ಗೃಹಕಾರ್ಮಿಕರು, ಕಟ್ಟಡ ನಿರ್ಮಾಣ ಕೆಲಸಗಾರರು, ದಾದಿಯರು ಮತ್ತು ಇತರ ವರ್ಗಗಳ ಮೇಲೆ ಕೇಂದ್ರಿಕೃತವಾಗಿದ್ದು, ಆಸಕ್ತರು ಅಭಿಯಾನದಲ್ಲಿ ಪಾಲ್ಗೊಳಬೇಕೆಂದು ಕಾರ್ಮಿಕ ಅಧಿಕಾರಿ ಇಬ್ರಾಹಿಂಸಾಬ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ