ಸ್ಪೂರ್ತಿಯ ನಡೆ ನೂತನ ಯೋಜನೆ! ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ಕಲಿಕೆ.!

ದಾವಣಗೆರೆ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಓದುತ್ತಿರುವ ಮಕ್ಕಳಿಗೆ ಸ್ಪೂರ್ತಿಯ ನಡೆ ಯೋಜನೆಯಡಿಯಲ್ಲಿ ಸ್ಪೋಕನ್ ಇಂಗ್ಲಿಷ್ ತರಗತಿ ನಡೆಸುವ ಸಲುವಾಗಿ ಪಠ್ಯಕ್ರಮ ನಿಗದಿಗೊಳಿಸುವಂತೆ ರಾಜ್ಯ ಸರ್ಕಾರ ಮೇ.30ರಂದು ಆದೇಶ ಹೊರಡಿಸಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರತಿ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯದಲ್ಲಿ ಸ್ಪೂರ್ತಿಯ ನಡೆ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ತರಗತಿ ನೀಡಲು ಆದೇಶಿಸಲಾಗಿದೆ. ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲು ಹಾಗೂ ಪಠ್ಯಕ್ರಮದಂತೆ ತರಬೇತಿಯ ತರಗತಿಗಳನ್ನು ನಡೆಸಲು ಪ್ರತಿ ಜಿಲ್ಲೆಯಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಜಿಲ್ಲಾ ಸಮಿತಿಯ ಮೂಲಕ ಅನುಷ್ಠಾನಗೊಳಿಸುವಂತೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತರು ಮೇಲುಸ್ತುವಾರಿ ನಡೆಸುವಂತೆ ಸೂಚಿಸಲಾಗಿದೆ.

ಸರ್ಕಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಓದುತ್ತಿರುವ ಮಕ್ಕಳಿಗೆ ಸ್ಪೋಕನ್ ಇಂಗ್ಲೀಷ್ ಹಾಗೂ ವ್ಯಕ್ತಿತ್ವ ವಿಕಸನದ ತರಬೇತಿಗಳನ್ನು ನೀಡಲು 5.00 ಕೋಟಿ ರೂಗಳ ವೆಚ್ಚದಲ್ಲಿ ಪ್ರಾರಂಭಿಸಲಾಗುವುದೆ0ದು ಘೋಷಿಸಿತ್ತು. ಅದರಂತೆ 2022-23ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ದಾಖಲಾಗಿರುವ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲೀಷ್ ಹಾಗೂ ವ್ಯಕ್ತಿತ್ವ ವಿಕಸನದ ತರಬೇತಿಗಳನ್ನು 5 ಕೋಟಿ ವೆಚ್ಚದಲ್ಲಿ ಸ್ಪೂರ್ತಿಯ ನಡೆ ಎಂಬ ಹೊಸ ಯೋಜನೆಯ ಮೂಲಕ ಪ್ರಾರಂಭಿಸಲು ಮಾರ್ಗಸೂಚಿ ಹಾಗೂ ಷರತ್ತುಗಳಿಗೊಳಪಟ್ಟು ಅನುಮೋದನೆ ನೀಡಿ ಆದೇಶಿಸಲಾಗಿದೆ.

ಅದರಂತೆ ಪ್ರತಿ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯದಲ್ಲಿ 2022-23ನೇ ಸಾಲಿನ ಜೂನ್ ಮಾಹೆಯಿಂದ ಹತ್ತು ತಿಂಗಳ ಕಾಲದಲ್ಲಿ ಪ್ರತಿ ತಿಂಗಳು ಒಂದು ಘಂಟೆಯ 15 ತರಗತಿಗಳಂತೆ ಮಾರ್ಗಸೂಚಿಗಳಂತೆ ಹಾಗೂ ಷರತ್ತುಗಳಿಗೊಳಪಟ್ಟು ಸ್ಪೋಕನ್ ಇಂಗ್ಲೀಷ್ ತರಬೇತಿಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ನಡೆಸಲು ಪಠ್ಯಕ್ರಮವನ್ನು ನಿಗದಿಗೊಳಿಸಬೇಕಾಗಿದೆ.

 

garudavoice21@gmail.com 9740365719

Leave a Reply

Your email address will not be published. Required fields are marked *

error: Content is protected !!