“ಕನ್ನಡ ಪುಸ್ತಕ ಸೊಗಸು 2021” ಬಹುಮಾನಕ್ಕಾಗಿ ಕೃತಿಗಳ ಆಹ್ವಾನ

ದಾವಣಗೆರೆ: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ, ಜನವರಿ 2021 ರಿಂದ ಡಿಸೆಂಬರ್ 2021ರ ಅವಧಿಯಲ್ಲಿ ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ ವಿವಿಧ ಬಹುಮಾನಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಯ್ಕೆಯಾದ ಕೃತಿಗಳ ಪ್ರಕಾಶಕರು, ಮುದ್ರಕರು, ಕಲಾವಿದರಿಗೆ ‘ಕನ್ನಡ ಪುಸ್ತಕ ಸೊಗಸು-2021’ ಬಹುಮಾನ ನೀಡಲಾಗುವುದು. ಆಸಕ್ತ ಪ್ರಕಾಶಕರು, ಮುದ್ರಕರು, ಕಲಾವಿದರು, ಲೇಖಕರುಗಳು ಸ್ವಯಂ ಅರ್ಜಿ ಸಲ್ಲಿಸಬಹುದಾಗಿದೆ.
ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಪ್ರಕಾಶಕರ ಹೆಸರು, ಮುದ್ರಣಾಲಯದ ಹೆಸರು, ಮುಖಪುಟ ಚಿತ್ರ ರಚನೆಯ ಕಲಾವಿದರ ಹೆಸರು / ಚಿತ್ರ ಕಲಾವಿದರ ಪೂರ್ಣ ವಿಳಾಸ – ಈ ಎಲ್ಲಾ ವಿವರಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ದಿನಾಂಕ:10.02.2022 ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002 – ಈ ವಿಳಾಸಕ್ಕೆ ಕಳುಹಿಸಿಕೊಡಬಹುದಾಗಿದೆ. ಸಲ್ಲಿಸಲಾಗುವ ಪುಸ್ತಕಗಳನ್ನು ಯಾವುದೇ ಕಾರಣಕ್ಕೂ ಹಿಂದಿರುಗಿಸಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು -560002 – ವೆಬ್ ಸೈಟ್ www.kannadapustakapradhikara.com, ದೂರವಾಣಿ ಸಂಖ್ಯೆ: 080-22484516 / 22107704 – ಇಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ

Leave a Reply

Your email address will not be published. Required fields are marked *

error: Content is protected !!