ವೃದ್ದಾಶ್ರಮ ತೆರೆಯಲು ಅರ್ಹ ಸಂಸ್ಥೆಗಳಿಂದ ಅರ್ಜಿ ಆಹ್ವಾನ
ದಾವಣಗೆರೆ : ಉಪ ವಿಭಾಗಕ್ಕೆ ಒಂದರಂತೆ (ದಾವಣಗೆರೆ ಮತ್ತು ಹೊನ್ನಾಳಿ) ವೃದ್ಧಾಶ್ರಮ ತೆರೆಯಲು ಅರ್ಹ ಸಂಸ್ಥೆಗಳಿಂದ ಅರ್ಹ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಯನ್ನು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿಗಳು, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಶಂಕರಲೀಲಾ ಗ್ಯಾಸ್ ಏಜೆನ್ಸಿ ಹತ್ತಿರ, ಎಂ.ಸಿ.ಸಿ ಬಿ ಬ್ಲಾಕ್, ದಾವಣಗೆರೆ ಪಡೆದು ಏಪ್ರಿಲ್ 15 ರೊಳಗಾಗಿ ಈ ಕಛೇರಿಗೆ ಸಲ್ಲಿಸ ಬೇಕೆಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ|| ಕೆ.ಕೆ. ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.