ಯುವ ಪರಿವರ್ತಕರ ತರಬೇತಿಗೆ ಅರ್ಜಿ ಆಹ್ವಾನ
ದಾವಣಗೆರೆ : ಯುವ ಸ್ಪಂದನ ಕಾರ್ಯಕ್ರಮದ ಯುವ ಪರಿವರ್ತಕರ ತರಬೇತಿಗಾಗಿ ಅರ್ಹ ಯುವತಿ/ಯುವಕರಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆರೋಗ್ಯ ಸಂಸ್ಥೆ, ಎಪಿಡಿಮಿಯಾಲಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರಿಂದ ಅನುಷ್ಟಾನಗೊಂಡಿರುವ ಹಾಗೂ ರಾಜ್ಯ ಸರ್ಕಾರದ ಅನುದಾನಿತ ಯೋಜನೆಯಾದ ಯುವಜನ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆಗಳ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಟಾನ ಯೋಜನೆಯ ಅಡಿಯಲ್ಲಿ ತರಬೇತಿ ನೀಡಲಾಗುವುದು.
ಯಾವುದೇ ಪದವಿ ಹಾಗೂ ಮೇಲ್ಪಟ್ಟ ಯುವಕರು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು. 21 ರಿಂದ 35 ವಯೋಮಾನದೊಳಗಿರಬೇಕು. ನ್ಯಾಮತಿ ತಾಲೂಕಿನಲ್ಲಿ ವಾಸಿಸುತ್ತಿರುವ ಖಾಯಂ ನಿವಾಸಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. ಅಭ್ಯರ್ಥಿಗಳು ತಮ್ಮ ಭಾವಚಿತ್ರದ ಸ್ವ ವಿವರೊಂದಿಗೆ ಸಹಾಯಕ ನಿರ್ದೇಶಕರ ಕಚೇರಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಾವಣಗೆರೆ ಇಲ್ಲಿಗೆ ಜೂ.10 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ದೂ.ಸಂ:8970490756/9380823091/08192-222059 ನ್ನು ಸಂಪರ್ಕಿಸಬಹುದೆAದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಸುಚೇತ ನೆಲವಿಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.