‘ಜಮೀನು ಸಕ್ರಮ’ಕ್ಕೆ ಮತ್ತೆ ಅರ್ಜಿ ಆಹ್ವಾನ
ಬೆಂಗಳೂರು: ರಾಜ್ಯದಲ್ಲಿ ಕಂದಾಯ ಪಾವತಿಸದ ಕಾರಣಕ್ಕೆ ಸರ್ಕಾರಿ ಪಡ, ಬೀಳು ಎಂದು ದಾಖಲಿಸಿರುವ ರೈತರ ಜಮೀನುಗಳನ್ನು ಸಕ್ರಮಗೊಳಿಸಲು ಮತ್ತೊಮ್ಮೆ ಅರ್ಜಿ ಆಹ್ವಾನಿಸಲಾಗುತ್ತಿದೆ. ಈ ಮೂಲಕ ಸರ್ಕಾರಿ ಜಮೀನು ಮಾಡುತ್ತಿದ್ದು, ಸಕ್ರಮಕ್ಕೆ ನಿರೀಕ್ಷೆಯಲ್ಲಿದ್ದಂತ ರೈತರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಈ ಕುರಿತಂತೆ ವಿಧಾನಸಭೆಯಲ್ಲಿ ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ, ಕಾಂಗ್ರೆಸ್ ಸದಸ್ಯ ಡಾ.ಯತೀಂದ್ರ ಸಿದ್ಧರಾಮಯ್ಯ ಕೇಳಿದಂತ ಪ್ರಶ್ನೆಗೆ ಉತ್ತರಿಸಿದ್ದು, ಕಂದಾಯ ಪಾವತಿಸದ ಕಾರಣಕ್ಕೆ ಸರ್ಕಾರಿ ಪಡ, ಬೀಳು ಎಂದು ದಾಖಲಿಸಿರುವ ರೈತರ ಜಮೀನುಗಳನ್ನು ಸಕ್ರಮಗೊಳಿಸಲು ಮತ್ತೊಮ್ಮೆ ಅರ್ಜಿ ಆಹ್ವಾನಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ, ಪರಿಶೀಲಿಸಲಾಗುವುದು ಎಂದರು.
ರಾಜ್ಯದಲ್ಲಿ ಕಂದಾಯ ಪಾವತಿಸದ ಕಾರಣ ಪಹಣಿಗಳಲ್ಲಿ ಬೀಳು ಎಂದು ದಾಖಲು ಮಾಡಿದ್ದ ರೈತರ ಜಮೀನುಗಳನ್ನು ಸಕ್ರಮಗೊಳಿಸಲು ಅರ್ಜಿ ಕರೆದಿದ್ದ ಅವಧಿಯಲ್ಲಿ, ಸಾಕಷ್ಟು ರೈತರಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗಿಲ್ಲ. ಹಾಗಾಗ ಪುನಹ ಅರ್ಜಿ ಸಲ್ಲಿಸಲು ಅವಕಾಶ ನೀಡಬೇಕೆಂದು ಕಾಂಗ್ರೆಸ್ ಸದಸ್ಯ ಡಾ. ಯತೀಂದ್ರ ಸಿದ್ಧರಾಮಯ್ಯ ಸರ್ಕಾರದ ಗಮನ ಸೆಳೆದರು. ಇದಕ್ಕೆ ಉತ್ತರಿಸಿದಂತ ಸಚಿವ ಮಾಧುಸ್ವಾಮಿ, ಸಕ್ರಮಗೊಳಿಸಲು 2014ರಲ್ಲಿ ಅರ್ಜಿ ಕರೆಯಲಾಗಿದ್ದು, ಜಿಲ್ಲಾಧಿಕಾರಿಗಳು, ಈಗ ಅರ್ಜಿ ಪರಿಶೀಲಿಸಿ ಇತ್ಯರ್ಥಪಡಿಸುತ್ತಾ ಬಂದಿದ್ದಾರೆ. ರೈತರ ಅನುಕೂಲಕ್ಕಾಗಿ ಮತ್ತೆ ಅರ್ಜಿ ಸಲ್ಲಿಸಲು ಅವಕಾಶ ನೀಡುವ ಬಗ್ಗೆ ಪರಿಶೀಲಿಸಲಾಗುವುದು ಎಂದರು.