ದಾವಣಗೆರೆ: ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ೧ ಸಂಸ್ಥೆಗೆ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ವಿವಿಧ ಕ್ಷೇತ್ರಗಳಲ್ಲಿ (ಶಿಕ್ಷಣ, ಸಾಹಿತ್ಯ, ಕಲೆ, ಕಾನೂನು, ಪ್ರತಿಭೆ/ಕ್ರೀಡೆ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆ) ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ ೬ ವೈಯಕ್ತಿಕ ಪ್ರಶಸ್ತಿಗಳನ್ನು ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ೧ ಸಂಸ್ಥೆಗೆ ಪ್ರಶಸ್ತಿ ಸೇರಿ ಒಟ್ಟು ೭ ಪ್ರಶಸ್ತಿಗಳನ್ನು ನೀಡಲಾಗುವುದು.
ಅರ್ಹ ಹಿರಿಯ ನಾಗರಿಕರು ಹಾಗೂ ಸಂಸ್ಥೆಗಳು ವೆಬ್‌ಸೈಟ್ http://www.dwdsc.karnataka.gov.in/ ಮೂಲಕ ಅಥವಾ ನಗರದ ಎಂ.ಸಿ.ಸಿ. ‘ಬಿ’ ಬ್ಲಾಕ್ ನಲ್ಲಿರುವ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿಗಳ ಕಛೇರಿಯಲ್ಲಿ ಅರ್ಜಿ ಪಡೆದು ಆಗಸ್ಟ್ ೧೪ ರೊಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂ. ಸಂ: ೦೮೧೯೨-೨೬೩೯೩೯ ಹಾಗೂ ಹಿರಿಯ ನಾಗರಿಕರ ಸ. ಕೇಂದ್ರದ ದೂ. ಸಂ: ೦೮೧೯೨೨೩೬೭೮೪ ಸಂಪರ್ಕಿಸಲು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ಡಾ. ಕೆ.ಕೆ. ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
