PSI ನೇಮಕಾತಿ ಅಕ್ರಮ.! ADGP ಅಮೃತ್ ಪೌಲ್ ಬಂಧನ.!

ಬೆಂಗಳೂರು : ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ಕರ್ತವ್ಯದಲ್ಲಿರುವ ADGP ಶ್ರೇಣಿಯ IPS ಪೊಲೀಸ್ ಅಧಿಕಾರಿಯನ್ನು ಸಿಐಡಿ ಪೊಲೀಸರು ಬಂಧನ ಮಾಡಿದ್ದಾರೆ.

PSI ನೇಮಕದಲ್ಲಿ ಆಕ್ರಮವಾಗಿ 30 ಲಕ್ಷ ರೂಪಾಯಿ ಹಣ ಪಡೆದಿರುವ ಅರೋಪದ ಹಿನ್ನೆಲೆಯಲ್ಲಿ ADGP ಅಮೃತ್ ಪೌಲ್ ಅವರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಅಮೃತ್ ಪೌಲ್ PSI ನೇಮಕ ವಿಭಾಗದ ಮುಖ್ಯಸ್ಥರಾಗಿದ್ದಾಗ ಆಕ್ರಮ ನಡೆದಿತ್ತು. ಈ ಅಕ್ರಮ ರಾಜ್ಯ ಸರ್ಕಾರದ ನಿದ್ದೆಗೆಡಿಸಿತ್ತು. ಪ್ರತಿಪಕ್ಷಗಳು ಕೇವಲ ಸಣ್ಣ ನೌಕರರನ್ನು ಬಂಧಿಸಿದರೆ ಸಾಲದು, ಇದರಲ್ಲಿ ಸಚಿವರನ್ನು ಬಂಧಿಸಬೇಕೆಂದು ಆಗ್ರಹ ಪಡಿಸಿದ್ದರು.

ಪಿಎಸ್‌ ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ನಾಲ್ಕನೇ ಬಾರಿಗೆ ವಿಚಾರಣೆಗೆ ಹಾಜರಾಗಿದ್ದ ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದ ಅಮೃತ್ ಪೌಲ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ಅವರನ್ನು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಬಂಧಿಸಿರುವುದು ನಿಜ ಗೃಹ ಸಚಿವ

ಈ ಕುರಿತು ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ನೇಮಕಾತಿ ವಿಭಾಗದ ಮುಖ್ಯಸ್ಥ ಅಮೃತ್ ಪೌಲ್ ಅವರನ್ನು ಬಂಧಿಸಲಾಗಿದೆ. ಅವರ ವಿರುದ್ಧ ಸೂಕ್ತ ರೀತಿಯ ಸಾಕ್ಷ್ಯಾಧಾರಗಳು ಲಭ್ಯವಿರುವ ಕಾರಣ ಬಂಧಿಸಲಾಗಿದೆ. ಇನ್ನು ಇದರಲ್ಲಿ ಭಾಗಿಯಾಗಿರುವ ಯಾರನ್ನು ಬಿಡುವ ಪ್ರಶ್ನೆಯೇ ಇಲ್ಲ ಎಂದ ಅವರು ಉಪ್ಪು ತಿಂದವರು ನೀರು ಕುಡಿಯಲೇ ಬೇಕು ಎಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!