IPS Uma Prashanth; ದಾವಣಗೆರೆ ನೂತನ ಎಸ್‍ಪಿಯಾಗಿ ಉಮಾ ಪ್ರಶಾಂತ್ ಅಧಿಕಾರ ಸ್ವೀಕಾರ
ದಾವಣಗೆರೆ; ದಾವಣಗೆರೆಯ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಉಮಾ ಪ್ರಶಾಂತ್ (IPS Uma Prashanth) ವರ್ಗಾವಣೆಗೊಂಡ ಡಾ. ಅರುಣ್ ಕೆ. ಅವರಿಂದ ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು ಜಿಲ್ಲೆಯಲ್ಲಿ ಕ್ರಿಮಿನಲ್, ಕಾನೂನು ಬಾಹಿರ ಚಟುವಟಿಕೆಗಳನ್ನು ತಡೆಯಲು ಕ್ರಮ ವಹಿಸಲಾಗುತ್ತದೆ, ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಿರುವುದರಿಂದ ಹೆಚ್ಚು ಅಪಘಾತಗಳಾಗುತ್ತಿರುವುದರಿಂದ, ಅಪಘಾತಗಳ ತಡೆಗೆ ಹಲವು ಕ್ರಮ ಕೈಗೊಳ್ಳಲಾಗುತ್ತದೆ. ಪೊಲೀಸರನ್ನು ಜನಸ್ನೇಹಿಯಾಗಿ ಮಾಡಿ ಹಾಗೂ ಜನರ ಸಹಕಾರದೊಂದಿಗೆ ಒಳ್ಳೆಯ ರೀತಿಯ ಕೆಲಸ ನಮ್ಮ ಉದ್ದೇಶವಾಗಿದೆ ಎಂದರು.
New SP Uma Prashanth Video 👇
ಮಹಿಳಾ ಮತ್ತು ಮಕ್ಕಳ ದೌರ್ಜನ್ಯಕ್ಕೆ ತಡೆಗೆ ಕ್ರಮ ಕೈಗೊಳ್ಳಲಾಗುವುದು. ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲಾಗುವುದು ಎಂದು ಅವರು, ರಾಜಕೀಯ ಒತ್ತಡದಿಂದ ಇಲ್ಲಿನ ಎಸ್ಪಿಯನ್ನು ವರ್ಗಾವಣೆ ಮಾಡಲಾಗಿದೆ ಎಂಬ ಮಾತಿದೆ ಎಂದ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಈ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ನನಗೆ ವರ್ಗಾವಣೆಯಾಗಿದೆ. ಹಾಗಾಗಿ ಇಲ್ಲಿಗೆ ಬಂದಿದ್ದೇನೆ ಎಂದರು.
ಹಿ0ದಿನ ಎಸ್ಪಿ ಡಾ.ಅರುಣ್ ಅವರು ನಗರದಲ್ಲಿ ಟ್ರಾಪಿಕ್ ವ್ಯವಸ್ಥೆ ನಿಯಂತ್ರಣ ಸಂಬಧ ಕೈಗೊಂಡಿದ್ದ ಎಲ್ಲ ಒಳ್ಳೆಯ ಕೆಲಸಗಳನ್ನು ಮುಂದುವರಿಸಿಕೊ0ಡು ಹೋಗಲಾಗುವುದು. ಎಲ್ಲ ಅಧಿಕಾರಿಗಳು ಕೂಡ ಅವರದೇ ಆದ ಸ್ವ ಸಾಮರ್ಥ್ಯದ ಮೂಲಕ ಉತ್ತಮ ಕೆಲಸ ಮಾಡುತ್ತಾರೆ. ಈ ನಿಟ್ಟಿನಲ್ಲಿ ನಾನೂ ಕೂಡ ಕೆಲಸ ಮಾಡುವುದಾಗಿ ತಿಳಿಸಿದರು.
ಅಪರಾಧ ಕೃತ್ಯಗಳ ತಡೆ ಮತ್ತು ಕಾನೂನು ಬಾಹಿರ ಚಟುವಟಿಕೆಗಳನ್ನು ಪೊಲೀಸ್ ಅಧಿಕಾರಿಗಳ ಸಹಕಾರದೊಂದಿಗೆ ಹತ್ತಿಕ್ಕಲಾಗುವುದು. ದಾವಣಗೆರೆಯಲ್ಲಿ ಒಳ್ಳೆಯ ಅಧಿಕಾರಿಗಳ ತಂಡ ಇದೆ. ಅವರ ಸಹಕಾರದೊಂದಿಗೆ ಅಕ್ರಮ ಮರಳು ಸಾಗಾಟ ಸೇರಿದಂತೆ ಕಾನೂನು ಬಾಹಿರ ಕೃತ್ಯಗಳ ತಡೆಗೆ ಕ್ರಮ ಕೈಗೊಳ್ಳಲಾಗುವುದು. ಈಗಷ್ಟೇ ಅಧಿಕಾರಿ ಸ್ವೀಕರಿಸಿದ್ದೇನೆ, ಜಿಲ್ಲೆಯ ಆಗುಹೋಗುಗಳ ಬಗ್ಗೆ ತಿಳಿದುಕೊಳ್ಳಲು ಕಾಲಾವಕಾಶ ಬೇಕಿದೆ ಎಂದರು.ದಾವಣಗೆರೆ ಬಗ್ಗೆ ಕೇಳಿ ತಿಳಿದುಕೊಂಡಿದ್ದೇನೆ ಅಷ್ಟೇ. ಆದರೆ ಪ್ರಾಯೋಗಿಕವಾಗಿ ಇಲ್ಲಿನ ಚಟುವಟಿಕೆಗಳ ಬಗ್ಗೆ ಇನ್ನಷ್ಟು ತಿಳಿದುಕೊಂಡು ಉತ್ತಮ ಆಡಳಿತ ನೀಡುವುದಾಗಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.