ಜೆ.ಜಿ. ನಾಗವೇಣಿ ಅವರಿಗೆ ಪಿಹೆಚ್ ಡಿ ಪದವಿ

ದಾವಣಗೆರೆ: ನಗರದ ಎ.ವಿ. ಕಮಲಮ್ಮ ಮಹಿಳಾ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಜೆ.ಜಿ. ನಾಗವೇಣಿ ಅವರು ದಾವಣಗೆರೆ ವಿಶ್ವವಿದ್ಯಾನಿಲಯದಿಂದ ಪಿಹೆಚ್.ಡಿ ಪದವಿಗೆ ಭಾಜನರಾಗಿದ್ದಾರೆ.
ದಾವಣಗೆರೆ ವಿಶ್ವವಿದ್ಯಾನಿಲಯದ ವಾಣಿಜ್ಯಶಾಸ್ತ್ರ ವಿಭಾಗದ ಸಹಪ್ರಾಧ್ಯಾಪಕ ಡಾ. ಐ.ಬಿ. ಸೀರಪ್ಪ ಅವರ ಮಾರ್ಗದರ್ಶನದಲ್ಲಿ ಜೆ.ಜಿ. ನಾಗವೇಣಿ ಇವರು ‘ಪರ್ಫಾರ್ಮೆನ್ಸ್ ಎವೆಲುಷನ್ ಆಫ್ ಸೆಲ್ಫ್ ಹೆಲ್ಪ್ ಗ್ರೂಪ್ಸ್ -ಎ ಕೇಸ್ ಸ್ಟಡಿ ಆಫ್ ದಾವಣಗೆರೆ ಡಿಸ್ಟ್ರಿಕ್ಟ್’ ವಿಷಯದ ಕುರಿತು ಪ್ರಬಂಧ ಮಂಡಿಸಿದ್ದರು.
ಇವರಿಗೆ ಬಾಪೂಜಿ ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿ ಡಾ. ಶಾಮನೂರು ಶಿವಶಂಕರಪ್ಪ, ಆಡಳಿತ ಮಂಡಳಿ ಸದಸ್ಯರು, ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ.ಪಿ. ಕುಮಾರ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.