ಬಿಜೆಪಿ ದಂಡನಾಯಕನಾಗಿ ಜೆ.ಪಿ.ನಡ್ಡಾ ಇನ್ನೊಂದು ವರ್ಷ ಮುಂದುವರಿಕೆ; ಅಮಿತ್ ಷಾ ಘೋಷಣೆ
ದೆಹಲಿ: ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಜೆಪಿ ನಡ್ಡಾ ಅವರು ಮತ್ತೊಂದು ವರ್ಷದ ಅವಧಿಗೆ ಮುಂದುವರಿಯಲಿದ್ದಾರೆ. ಈ ಬಗ್ಗೆ ದೆಹಲಿಯಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕಾರಿಣಿಯಲ್ಲಿ ಪಕ್ಷದ ಪ್ರಮುಖರು ತೀರ್ಮಾನಿಸಿದ್ದಾರೆ.
ಮುಂದಿನ ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗೆ ಹಾಗೂ ಮುಂದಿನ ವರ್ಷದ ಲೋಕಸಭಾ ಚುನಾವಣೆಗೆ ಸಜ್ಜಗುವ ಸಂಬಂಧ ಬಿಜೆಪಿ ಕಳೆದೆರಡು ದಿನಗಳಿಂದ ದೆಹಲಿಯಲ್ಲಿ ಚಿಂತನ ಮಂಥನ ನಡೆಸುತ್ತಿದೆ. ಪಕ್ಷದ ಈ ಕಾರ್ಯಕಾರಿಣಿ ಸಭೆಯಲ್ಲಿ ರಾಷ್ಟ್ರೀಯ ಅಧ್ಯಕ್ಷರ ಅಧಿಕಾರಾವಧಿ ಬಗ್ಗೆಯೂ ಮುಖಂಡರು ಚರ್ಚೆ ನಡೆಸಿದ್ದಾರೆ.
HM Shri @AmitShah addresses a press conference at NDMC Convention Centre, New Delhi. #BJPNEC2023 https://t.co/5vEppCBVbu
— BJP (@BJP4India) January 17, 2023
ಈ ನಡುವೆ, ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಮತ್ತೊಂದು ವರ್ಷದ ಅವಧಿಗೆ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ ಎಂದು ಗೃಹ ಸಚಿವ ಅಮಿತ್ ಷಾ ಪ್ರಕಟಿಸಿದ್ದಾರೆ. 2024ರ ಲೋಕಸಭಾ ಚುನಾವಣೆಯವರೆಗೆ ಜೆ.ಪಿ.ನಡ್ಡಾ ಅವರೇ ಬಿಜೆಪಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯನ್ಬು ಪ್ರಧಾನಿ ನರೇಂದ್ರ ಮೋದಿ ಮತ್ತು ಜೆ.ಪಿ. ನಡ್ಡಾ ಅವರ ನಾಯಕತ್ವದಲ್ಲಿ ಎದುರಿಸಿ 2019ಕ್ಕಿಂತ ಹೆಚ್ಚಿನ ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇತ್ತ ಕರ್ನಾಟಕ ಪ್ರದೇಶ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಅಧಿಕಾರಾವಧಿ ಕೂಡಾ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಕಾರ್ಯತಂತ್ರ ಬಗ್ಗೆ ವರಿಷ್ಠರು ತೀವ್ತ ಚರ್ಚೆಯಲ್ಲಿ ತೊಡಗಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.