ಜಗಳೂರು ತಾಲ್ಲೂಕಿನ ಪಿಡಿಒ ಎ.ಟಿ. ನಾಗರಾಜ್ ಸಸ್ಪೆಂಡ್ – ಸಿಇಒ

ದಾವಣಗೆರೆ: ಜಗಳೂರು ತಾಲ್ಲೂಕಿನ ಗುತ್ತಿದುರ್ಗ, ಹಿರೇಮಲ್ಲನಹೋಳೆ ಮತ್ತು ಗರುಸಿದ್ದಾಪುರ ಗ್ರಾಮ ಪಂಚಾಯಿತಿಗಳ ಪಿಡಿಒ ಆಗಿ ಕಾರ್ಯ ನಡೆಸುತ್ತಿದ್ದ ಎ.ಟಿ. ನಾಗರಾಜ್ ಅವರನ್ನು ಜಿಲ್ಲಾ ಪಂಚಾಯ್ತಿ ಸಿಇಒ ಡಾ.ಎ.ಚನ್ನಪ್ಪ ಅಮಾನತುಗೊಳಿಸಿ ಆದೇಶಿಸಿದ್ದಾರೆ.

ತಾಲ್ಲೂಕಿನ ಗೌರಿಪುರ ಗ್ರಾಮದ ಆರ್ ಟಿ ಐ ಕಾರ್ಯಕರ್ತ ರಾಮಕೃಷ್ಣ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಡಿಒ ಎ.ಟಿ. ನಾಗರಾಜ್ ವಿರುದ್ಧ ದೂರು ದಾಖಲಾದ ಹಿನ್ನೆಲೆಯಲ್ಲಿ ಅವರನ್ನು ಅಮಾನತುಗೊಳಿಸಲಾಗಿದೆ.
ಜಗಳೂರು ತಾಲ್ಲೂಕಿನ ಗುತ್ತಿದುರ್ಗ, ಹಿರೇಮಲ್ಲನಹೋಳೆ ಮತ್ತು ಗರುಸಿದ್ದಾಪುರ ಗ್ರಾಮ ಪಂಚಾಯಿತಿಗಳ ಪಿಡಿಒ ಆಗಿ ನಾಗರಾಜ್ ಕಾರ್ಯನಿರ್ವಹಿಸುತ್ತಿದ್ದರು.

Leave a Reply

Your email address will not be published. Required fields are marked *

error: Content is protected !!