ದಾವಣಗೆರೆ : ಜನಸ್ಪಂದನ ಸಭೆ ಮಾ.31 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಏರ್ಪಡಿಸಲಾಗಿದ್ದು, ಸಭೆಯಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲಾಗುವುದು. ಸಾರ್ವಜನಿಕರು ತಮ್ಮ ಅಹವಾಲುಗಳೊಂದಿಗೆ ಸಭೆಗೆ ಹಾಜರಾಗಿ ಜನಸ್ಪಂದನ ಸಭೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.