ಜನಾರ್ಧನ ರೆಡ್ಡಿ ಆಸ್ತಿ ಜಪ್ತಿಗೆ ಸರ್ಕಾರ ಅಸ್ತು.!

ಬೆಂಗಳೂರು: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹಾಗೂ ಅವರ ಕುಟುಂಬದವರಿಗೆ ಸೇರಿದ ಹೆಚ್ಚುವರಿ ಆಸ್ತಿ ಜಪ್ತಿ ಪ್ರಕ್ರಿಯೆಗೆ ಕರ್ನಾಟಕ ರಾಜ್ಯ ಸರ್ಕಾರ ಅನುಮತಿ ನೀಡಿದೆ.
ಸರ್ಕಾರದ ಪರ ವಕೀಲ ವಿನೋದ್, ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಸಿಬಿಐ ವಿಶೇಷ ನ್ಯಾಯಲಯಕ್ಕೆ ಅರ್ಜಿ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿ‌ ಗೃಹ ಇಲಾಖೆ ಹೊರಡಿಸಿರುವ ಆದೇಶದ ಪ್ರತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು.

ಅಕ್ರಮ ಗಣಿಗಾರಿಕೆ ಪ್ರಕರಣದ ಅರೋಪದ ಹಿನ್ನೆಲೆಯಲ್ಲಿ ಗಾಲಿ ಜನಾರ್ದನ ರೆಡ್ಡಿ ಹಾಗೂ ಅವರ ಕುಟುಂಬದ ಸದಸ್ಯರ ಹೆಚ್ಚುವರಿ ಆಸ್ತಿಗಳನ್ನು ಜಪ್ತಿ ಮಾಡಲು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು.
ಅನುಮತಿ ಕೋರಿ ಸಲ್ಲಿಸಿರುವ ಈ ಮನವಿಯನ್ನು ಪರಿಗಣಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಸಿಬಿಐ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು. ಸಿಬಿಐ ಪರ ಪಿ.ಪ್ರಸನ್ನಕುಮಾರ್ ವಾದ ಮಂಡಿಸಿದರು.

Leave a Reply

Your email address will not be published. Required fields are marked *

error: Content is protected !!