ಜನೌಷಧಿ ಕೇಂದ್ರದಿಂದ ಜನ ಸಾಮಾನ್ಯರಿಗೆ ಸಾಕಷ್ಟು ಅನುಕೂಲ: ಡಾ. ಜಿ.ಎಂ.ಸಿದ್ದೇಶ್ವರ

ದಾವಣಗೆರೆ: ಜನ ಸಾಮಾನ್ಯರಿಗೆ ಕೈಗೆಟಕುವ ಬೆಲೆಯಲ್ಲಿ ಔಷಧಿಯನ್ನು ನೀಡುವ ದೃಷ್ಥಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಜನೌಷಧಿ ಯೋಜನೆಯನ್ನು ಪ್ರಾರಂಭಿಸಿದರು ಎಂದು ಸಂಸದರಾದ ಡಾ. ಜಿ.ಎಂ.ಸಿದ್ದೇಶ್ವರ್ ಹೇಳಿದರು.
ಶೇಖರಪ್ಪ ನಗರದಲ್ಲಿ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಡಿಮೆ ಬೆಲೆಯಲ್ಲಿ ಉತ್ತಮ ಗುಣಮಟ್ಟದ ಔಷಧಯನ್ನು ನೀಡುವುದರಿಂದ ಜನ ಸಾಮಾನ್ಯರಿಗೆ ಸಾಕಷ್ಟು ಅನುಕೂಲವಾಗಿದೆ ಎಂದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮಹಾಪೌರರಾದ ಎಸ್.ಟಿ.ವೀರೇಶ್, ದೂಡ ಅಧ್ಯಕ್ಷ ದೇವರಮನಿ ಶಿವಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷರಾದ ವೀರೇಶ್ ಹನಗವಾಡಿ, ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಯಶವಂತ ರಾವ್ ಜಾಧವ್, ಪಾಲಿಕೆ ಸದಸ್ಯರಾದ ಪ್ರಸನ್ನ ಕುಮಾರ್, ವೀರೇಶ್.ಕೆ.ಎಂ, ವಕೀಲರಾದ ರಾಘವೇಂದ್ರ ಮತ್ತು ಇತರರು ಉಪಸ್ಥಿತರಿದ್ದರು.