ಪರೋಕ್ಷವಾಗಿ ಬಿಜೆಪಿ ಬೆಂಬಲಿಸುವ ಬದಲು ಜ್ಯಾತ್ಯಾತೀತ ಜನತಾದಳವನ್ನು ಬಿಜೆಪಿಯೊಂದಿಗೆ ವಿಲಿನಗೊಳಿಸಿಕೊಳ್ಳಲಿ : ಡಿ. ಬಸವರಾಜ್

ದಾವಣಗೆರೆ: ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರ್‌ಸ್ವಾಮಿ ಅವರು ಪರೋಕ್ಷವಾಗಿ ಬಿಜೆಪಿ ಬೆಂಬಲಿಸುವ ಬದಲು ಜ್ಯಾತ್ಯಾತೀತ ಜನತಾದಳವನ್ನು ಬಿಜೆಪಿಯೊಂದಿಗೆ ವಿಲಿನಗೊಳಿಸಿಕೊಳ್ಳಲಿ ಎಂದು ಕೆಪಿಸಿಸಿ ವಕ್ತಾರ ಡಿ. ಬಸವರಾಜ್ ಸಲಹೆ ನೀಡಿದ್ದಾರೆ.

ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿರುವ ಅವರು, ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ವೇಳೆ ರಾಜ್ಯದ ಅಭಿವೃದ್ಧಿಯನ್ನು ಉತ್ತುಂಗಕ್ಕೆ ಕೊಂಡೊಯ್ದಿದ್ದಾರೆ. ರಾಜ್ಯವನ್ನು ಹಸಿವು ಮುಕ್ತ ಕರ್ನಾಟಕವನ್ನಾಗಿ ಮಾಡಲು ಅನ್ನಭಾಗ್ಯ ಜಾರಿ ಮಾಡಿದ ಅನ್ನದಾತರಾಗಿದ್ದಾರೆ ಎಂದು ರಾಜ್ಯದ ಜನತೆಯಿಂದ ಪ್ರಶಂಸೆ ಪಡೆದಿದ್ದಾರೆ. ಈಗ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರನ್ನು ಟೀಕಿಸಿ ಪರೋಕ್ಷವಾಗಿ ಬಿಜೆಪಿಯನ್ನು ಬೆಂಬಲಿಸುವ ಕೆಲಸವನ್ನು ಕುಮಾರಸ್ವಾಮಿ ಅವರು ಮಾಡುತ್ತಿದ್ದಾರೆ ಎಅಂದು ಆಕ್ರೋಶ ವ್ಯಕ್ತಪಡಿಸಿದರು.

೨೦೦೪ರಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ  ಕಾಂಗ್ರೆಸ್ ನಾಯಕ ಜಾಫರ್ ಶರೀಫ್ ವಿರುದ್ಧ ಜೆಡಿಎಸ್‌ನಿಂದ ಸಿ.ಎಂ. ಇಬ್ರಾಹಿಂರವರನ್ನು ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟು ಬಿಜೆಪಿಯ ಹೆಚ್.ಟಿ. ಸಾಂಗ್ಲಿಯಾನ ಗೆಲ್ಲಲ್ಲು ಶ್ರಮಿಸಿದರು. ಅಲ್ಲಿಂದ ಇಂದಿನವರೆಗೂ ಬಿಜೆಪಿಯ ಜೊತೆಗೆ ಚುನಾವಣೆಗಳಲ್ಲಿ ಮುಸ್ಲಿಂ ಅಭ್ಯರ್ಥಿಗಳನ್ನು ಹಾಕುವುದರ ಮೂಲಕ ಒಳ ಒಪ್ಪಂದ ಮಾಡಿಕೊಂಡಿದ್ದಾರೆಂದು ಹೆಚ್.ಡಿ.ಕೆ. ನಿಲುವನ್ನು ಡಿ. ಬಸವರಾಜ್ ಖಂಡಿಸಿದರು.

Leave a Reply

Your email address will not be published. Required fields are marked *

error: Content is protected !!