ಜೀತ ಪದ್ದತಿಯನ್ನು ಬುಡ ಸಮೇತ ಕಿತ್ತೊಗೆಯಬೇಕು; ರಾಜೇಶ್ವರಿ ಎನ್.ಹೆಗಡೆ

ಜೀತ ಪದ್ದತಿ

ದಾವಣಗೆರೆ; ಜೀತ ಪದ್ದತಿ ನಿರ್ಮೂಲನೆ ಮಾಡಲು ಕಾಯ್ದೆ ರೂಪಿಸಲಾಗಿದ್ದರೂ ಅಲ್ಲಲ್ಲಿ ವರದಿಯಾಗುತ್ತಿದ್ದು ಇದನ್ನು ಬುಡ ಸಮೇತ ಕಿತ್ತುಗೆಯಲು ಎಲ್ಲರೂ ಸಹಕಾರ ನೀಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ವರಿ ಎನ್. ಹೆಗಡೆ ಹೇಳಿದರು.
ಶುಕ್ರವಾರ (ಫೆ.9) ರಂದು ಜಿಲ್ಲಾಡಳಿತ, ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ನಗರದ ಅಂಬೇಡ್ಕರ್ ವೃತ್ತದಲ್ಲಿ ಆಯೋಜಿಸಲಾಗಿದ್ದ ಜೀತಪದ್ದತಿ ನಿರ್ಮೂಲನಾ ದಿನಾಚರಣೆಯ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಜಾಥಾ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು. ಈ ಹಿಂದಿನ ಕಾಲದಿಂದಲೂ ಜೀತ ಪದ್ದತಿ ರೂಡಿಯಲ್ಲಿದೆ, ಮನೆಯಲ್ಲಿ ಹಣಕಾಸಿನ ತೊಂದರೆಯಾದರೆ ಶ್ರೀಮಂತರ ಬಳಿ ಹಣವನ್ನು ಪಡೆಯುತ್ತಿದ್ದರು. ಪಡೆದ ಹಣಕ್ಕೆ ಬಡ್ಡಿಯ ರೂಪದಲ್ಲಿ ಎಲ್ಲರೂ ಸಹ ಅವರ ಮನೆಯಲ್ಲಿ ಜೀತವನ್ನು ಮಾಡಬೇಕಿತ್ತು. ಜೀತ ಪದ್ದತಿ ರದ್ದತಿ ಕಾಯ್ದೆಯನ್ನು 1976 ರಲ್ಲಿ ದೇಶದಾದ್ಯಂತ ಜಾರಿ ಮಾಡಲಾಯಿತು. ಜೀತ ಪದ್ದತಿ ಎಲ್ಲಿ ಇದೆ, ಅದನ್ನು ಗುರುತಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿ ಅದನ್ನು ನಿರ್ಮೂಲನೆ ಮಾಡಬೇಕು. ಇಂತಹ ಪ್ರಕರಣಗಳು ಕಂಡುಬಂದರೆ ಅಂಥವರಿಗೆ ಪುನರ್ವಸತಿ ಕಲ್ಪಿಸಬೇಕು ಎಂದ ಅವರು ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಅಂಗವಾಗಿ ಪ್ರತಿಜ್ಞಾ ವಿಧಿ ಭೋದಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಮಾತಾನಾಡಿ ಯಾವುದೇ ಒಬ್ಬ ವ್ಯಕ್ತಿಗೆ ಅವನ ಇಚ್ಛೆ ವಿರುದ್ಧವಾಗಿ ಅವನನ್ನು ಕೂಡಿಟ್ಟು ಕೆಲಸವನ್ನು ಮಾಡಿಸುತ್ತಾರೆ, ಅದು ನಮ್ಮ ಗಮನಕ್ಕೆ ಬಂದರೆ, ನಾವು ಕಾನೂನು ರೀತಿ ಕ್ರಮವನ್ನು ತೆಗೆದುಕೊಳ್ಳುತ್ತೇವೆ. ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಇರಬೇಕು, ಜೀತ ಪದ್ದತಿ ನಿರ್ಮೂಲನೆ ಕಾನೂನು ತಿಳಿದುಕೊಂಡು ಇಂತಹ ಘಟನೆಗಳು ಎಲ್ಲಿಯಾದರೂ ನಡೆದರೆ ಅದನ್ನು ಗುರುತಿಸಿ ಸಂಬಂಧ ಪಟ್ಟವರ ಗಮನಕ್ಕೆ ತರಬೇಕು. ಆಗ ಮಾತ್ರ ಕಾನೂನು ರೀತಿ ಕ್ರಮವನ್ನು ತೆಗೆದುಕೊಳ್ಳಲು ಸಾಧ್ಯವಾಗುತ್ತದೆ. ಪ್ರತಿಯೊಬ್ಬ ತಂದೆ, ತಾಯಿ ಜೀತ ಪದ್ಧತಿಯ ಅಥವಾ ಜೀತದ ಕೆಲಸದಲ್ಲಿ ತೊಡಗಿದಲ್ಲಿ ಅವರ ಮಕ್ಕಳು ಸಹ ಆ ಕೆಲಸವನ್ನು ಮಾಡುತ್ತಾರೆ. ಈ ಜೀತಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆ ಆಗಬೇಕೆಂಬುದು ಪ್ರತಿಯೊಬ್ಬರ ಧ್ಯೇಯ ಆಗಿದೆ. ಜೀತ ಪದ್ದತಿ ಸಂಪೂರ್ಣವಾಗಿ ತೊಡೆದು ಹಾಕಲು ಬದ್ದರಾಗಿದ್ದಲ್ಲಿ ಮಾತ್ರ ನಿರ್ಮೂಲನೆ ಸಾಧ್ಯವಾಗುತ್ತದೆ ಎಂದರು.

ಜೀತ ಪದ್ದತಿ ಜೀತ ಪದ್ದತಿ
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್.ಬಿ.ಇಟ್ನಾಳ್ ಮಾತನಾಡಿ ಜೀತ ಪದ್ಧತಿಯನ್ನು ನಿರ್ಮೂಲನೆ ಮಾಡುವುದು ನೆಮ್ಮಲ್ಲರ ಜವಾಬ್ದಾರಿಯಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಜಾಗೃತಿ ಮೂಡಿಸುವುದು ಅತ್ಯವಶ್ಯವಿದೆ. ಸರ್ಕಾರ ಜನ ಕಲ್ಯಾಣಕ್ಕೆ ಸಾಕಷ್ಟು ಯೋಜನೆಗಳನ್ನು ರೂಪಿಸಿದ್ದು ಅವುಗಳ ಸದ್ಬಳಕೆ ಮಾಡಿಕೊಳ್ಳುವ ಮೂಲಕ ಆರ್ಥಿಕವಾಗಿ ಸಬಲರಾಗುವಂತೆ ಹೇಳುವುದು ನಮ್ಮ ಕರ್ತವ್ಯ ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ.ಮ.ಕರೆಣ್ಣವರ ಜಿಲ್ಲಾ ಮಟ್ಟದ ಜೀತಪದ್ದತಿ ನಿರ್ಮೂಲನಾ ದಿನಾಚರಣೆಯ ಜಾಥಾ ಅಂಗವಾಗಿ ಸಂವಿಧಾನದ ಪ್ರಸ್ತಾವನೆ ಓದುವ ಮೂಲಕ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು.
ತಹಶೀಲ್ದಾರ್ ಅಶ್ವಥ್, ಜಿ.ಪಂ. ಸಿಪಿಓ ಮಲ್ಲನಾಯ್ಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಿಕಿ ವಾಸಂತಿ ಉಪ್ಪಾರ್, ಡಿಡಿಪಿಐ ಜಿ.ಕೊಟ್ರೇಶ್, ವಕೀಲರ ಸಂಘದ ಅಧ್ಯಕ್ಷರಾದ ಅರುಣಕುಮಾರ್.ಎಲ್.ಹೆಚ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

error: Content is protected !!