ಜೀವಮಾನ ಸಾಧನೆ ಹಾಗೂ ರಾಜ್ಯ ಕ್ರೀಡಾ ರತ್ನ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಹಿರಿಯ ಕ್ರೀಡಾಪಟು ಅಥವಾ ತರಬೇತುದಾರರಾಗಿ ಸಾಧನೆ ಮಾಡಿರುವ ಕ್ರೀಡಾಪಟುಗಳಿಂದ ಜೀವಮಾನ ಸಾಧನೆ ಹಾಗೂ ಗ್ರಾಮೀಣ ಕ್ರೀಡೆಗಳಿಗೆ ಪ್ರೋತ್ಸಾಹ ನೀಡಲು 2020 ನೇ ಸಾಲಿನ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಸೆ.15 ರೊಳಗಾಗಿ https://serviceonline.gov.in/karnataka ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 08192-237480 ಕ್ಕೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.