ಜಿಲ್ಲೆಯಲ್ಲಿ ಸೆಪ್ಟೆಂಬರ್ 13 ರವರೆಗೆ ರಾತ್ರಿ ಕರ್ಪ್ಯೂ ಮುಂದುವರಿಕೆಗೆ ಆದೇಶ – ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ
ದಾವಣಗೆರೆ: ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಿಸಲು ವಿಧಿಸಿದ್ದ ರಾತ್ರಿ ಕರ್ಫ್ಯೂವನ್ನು ಸೆ.13ರ ವರೆಗೆ ಮುಂದುವರೆಸಿರುವುದಾಗಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದ್ದಾರೆ.
ಈ ಮೊದಲು ಆ.31 ರವರೆಗೆ ಪ್ರತಿದಿನ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ರಾತ್ರಿ ಕರ್ಫ್ಯೂ ಘೋಷಿಸಿ ಆದೇಶ ಹೊರಡಿಸಲಾಗಿತ್ತು. ಇದೀಗ ಸರ್ಕಾರದ ಆದೇಶದನ್ವಯ ಕರ್ಫ್ಯೂವನ್ನು ಮುಂದುವರೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕೋವಿಡ್ ನಿಯಂತ್ರಿಸಲು ಸಾರ್ವಜನಿಕರು ಮಾಸ್ಕ್, ಸ್ಯಾನಿಟೈಸರ್ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯ. ಮದುವೆ ಮತ್ತಿತರ ಸಮಾರಂಭಗಳಿಗೆ ಗರಿಷ್ಠ 400 ಜನರು ಮಾತ್ರ ಸೇರಲು ಅವಕಾಶ ನೀಡಲಾಗಿದೆ. ಸಾರ್ವಜನಿಕರು ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸದೇ ಇದ್ದಲ್ಲಿ ಕಾನೂನು ಕ್ರಮ ಜರುಗಿಸುವುದಾಗಿ ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.