ಜನವರಿ 13 ರಂದು ಎವಿಕೆ ಕಾಲೇಜಿನಲ್ಲಿ ಉದ್ಯೋಗ ಮೇಳ

ದಾವಣಗೆರೆ : ರಾಷ್ಟ್ರೀಯ ವೃತ್ತಿ ಸೇವಾ ಯೋಜನೆಯ ‘ಮಾದರಿ ವೃತ್ತಿ ಕೇಂದ್ರ’ ಅಡಿಯಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಎ.ವಿ.ಕೆ. ಮಹಿಳಾ ಕಾಲೇಜು, ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಜ.13 ರಂದು ಬೆಳಗ್ಗೆ 10 ಗಂಟೆಗೆ ನಗರದ ಅಕ್ಕಮಹಾದೇವಿ ರಸ್ತೆಯಲ್ಲಿರುವ ಎ.ವಿ.ಕೆ. ಮಹಿಳಾ ಕಾಲೇಜಿನಲ್ಲಿ ಉದ್ಯೋಗ ಮೇಳ ವನ್ನು ಆಯೋಜಿಸಲಾಗಿದೆ.
ಈ ಉದ್ಯೋಗ ಮೇಳದಲ್ಲಿ ಖಾಸಗಿ ಕಂಪನಿಗಳು ಭಾಗವಹಿಸುತ್ತಿದ್ದು, ಎಸ್.ಎಸ್.ಎಲ್.ಸಿ, ಪಿಯುಸಿ, ಐ.ಟಿ.ಐ, ಡಿಪ್ಲೊಮಾ, ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಬಿ.ಎ/ಬಿ.ಬಿ.ಎಂ, ಬಿ.ಸಿ.ಎ, ಬಿ.ಪಾರ್ಮ, ಡಿ.ಪಾರ್ಮ, ಬಿ.ಇ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಆಸಕ್ತ ಅಭ್ಯರ್ಥಿಗಳು ಕನಿಷ್ಠ 15 ಸೆಟ್ ಬಯೋಡಾಟಾ, ಆಧಾರ್ ಕಾರ್ಡ್ ನೊಂದಿಗೆ ಹಾಜರಾಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ: 6361550016, 7406323294 ಸಂಪರ್ಕಿಸಬಹುದೆಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.