women rights; ಮಹಿಳೆಯರ ಹಕ್ಕುಗಳ ಸಂರಕ್ಷಿಸಲು ಕೈಜೋಡಿಸಿ: ಎಸ್.ಜಿ ಸಲಗರೆ

ದಾವಣಗೆರೆ, ಅ.13: ಸಮಾಜದಲ್ಲಿ ಮಹಿಳೆಯರ ಮೇಲಾಗುತ್ತಿರುವಂತಹ ದೌರ್ಜನ್ಯ, ಶೋಷಣೆಗಳನ್ನು ತಡೆಗಟ್ಟಬೇಕು ಮತ್ತು ಅವರ ಮೂಲಭೂತ ಹಕ್ಕುಗಳನ್ನು (women rights) ಸಂರಕ್ಷಿಸಲು ಎಲ್ಲರೂ ಕೈಜೋಡಿಸಬೇಕಾಗಿದೆ ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಮುಖ್ಯ ನ್ಯಾಯಿಕ ದಂಡಾಧಿಕಾರಿ ಎಸ್.ಜಿ ಸಲಗರೆ ತಿಳಿಸಿದರು.

ಶುಕ್ರವಾರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಹಯೋಗದೊಂದಿಗೆ ನಗರದ ಬಾಪೂಜಿ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಜರುಗಿದ ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಹೆಣ್ಣು ತನ್ನ ಸಂಪೂರ್ಣ ಸಾಮರ್ಥ್ಯವನ್ನು ಅರಿತುಕೊಳ್ಳಲು ಹಾಗೂ ಪ್ರಪಂಚದಾದ್ಯಂತ ಹೆಣ್ಣಿನ ಸಾಧನೆಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಜಗತ್ತಿನಲ್ಲಿ ಹುಟ್ಟಿದ ಮನುಷ್ಯನಿಗೆ ಎಲ್ಲರಂತೆ ಜೀವಿಸುವ ಹಕ್ಕಿದೆ. ಗಂಡು-ಹೆಣ್ಣು ಎಂಬ ತಾರತಮ್ಯ ಮಾಡದೆ ಎಲ್ಲರೂ ಸಮಾನವಾಗಿ ಜೀವಿಸಬೇಕಾಗಿದೆ. ನಮ್ಮ ದೇಶದಲ್ಲಿ ಹಲವಾರು ಕಾನೂನುಗಳು ಜಾರಿಯಲ್ಲಿದ್ದರೂ ಸಹ ಈಗಲೂ ಹೆಣ್ಣಿನ ಮೇಲೆ ದರ‍್ಜನ್ಯ, ಶೋಷಣೆಗಳಾಗುತ್ತಿವೆ. ಆದ್ದರಿಂದ ಈ ನಿಟ್ಟಿನಲ್ಲಿ ಕಾನೂನು ಮತ್ತು ಹಕ್ಕುಗಳ ಕುರಿತು ಜಾಗೃತಿ ಮೂಡಿಸನಬೇಕು.

electricity; ಆಕಸ್ಮಿಕ‌ ಸಂದರ್ಭಕ್ಕೆ ಅಗತ್ಯ ಸಿದ್ದತೆ ಏಕೆ ಮಾಡಿಕೊಂಡಿಲ್ಲ: ಖಾರವಾಗಿ ಪ್ರಶ್ನಿಸಿದ ಮುಖ್ಯಮಂತ್ರಿ

ಇತ್ತೀಚಿನ ದಿನಗಳಲ್ಲಿ ಹೆಣ್ಣು ಮಕ್ಕಳು ಶಿಕ್ಷಣವಂತರಾಗಿ ಎಲ್ಲಾ ಕ್ಷೇತ್ರದಲ್ಲಿ ಕೂಡ ತಮ್ಮದೇ ಆದ ಸಾಧನೆ ಮಾಡುತ್ತಿದ್ದಾರೆ. ಪುರುಷ ಪ್ರಧಾನ ಸಮಾಜವನ್ನು ನಾವು ಕಾಣಬಹುದಾಗಿದ್ದು ಇದನ್ನು ತೊಲಗಿಸಬೇಕು. ಹೆಣ್ಣು ಸಹ ಗಂಡಿನ ಸಸಾಮರ್ಥ್ಯವನ್ನು ಉಳ್ಳವರಾಗಿದ್ದಾರೆ. ಸಮಾಜದಲ್ಲಿ ಮಹಿಳೆಯರ ಮೇಲಾಗುತ್ತಿರುವಂತಹ ದೌರ್ಜನ್ಯ ಶೋಷಣೆಗಳನ್ನು ತಡೆಗಟ್ಟಿ ಮತ್ತು ಯಾವ ಮಹಿಳೆ ಕಾನೂನು, ಹಕ್ಕುಗಳಿಂದ ವಂಚಿತರಾಗಿದ್ದಾರೋ ಅವರಿಗೆ ನ್ಯಾಯ ಒದಗಿಸಲು ಪ್ರಯತ್ನಿಸಬೇಕು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಮಾತನಾಡಿ ಮಹಿಳೆಯರು ಹಿಂದಿನ ಕಾಲದಿಂದಲೂ ದರ‍್ಜನ್ಯ, ತಾರತಮ್ಯ, ಶೋಷಣೆಗೆ ಒಳಗಾಗಿದ್ದಾರೆ. ಈ ನಿಟ್ಟಿನಲ್ಲಿ ಹೆಣ್ಣು ಶಿಕ್ಷಣದಿಂದ ತನ್ನನ್ನು ತಾನು ಸಬಲೀಕರಣಗೊಳ್ಳಬೇಕಾಗಿದೆ. ಶಿಕ್ಷಣದ ಜೊತೆಗೆ ಹೆಣ್ಣು ಮಕ್ಕಳು ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು

ಪ್ರತಿಯೊಂದು ಹೆಣ್ಣಿಗೆ ತನ್ನದೇ ಆದ ಸಾಮರ್ಥ್ಯವಿದೆ, ಅದನ್ನು ತೋರ್ಪಡಿಸುವಂತಾಗಬೇಕು. ಕೇವಲ ಫಲಿತಾಂಶಕ್ಕಾಗಿ ಶಿಕ್ಷಣವನ್ನು ಪಡೆಯದೆ ಸಮಾಜದಲ್ಲಿ ಒಂದು ಹೆಣ್ಣು ಬದುಕುವುದನ್ನು ಶಿಕ್ಷಣವಂತಳಾಗಬೇಕು ಮತ್ತು ತನ್ನು ಕುಟುಂಬದ ನಿರ್ವಹಣೆ ಸಾಮರ್ಥ್ಯವನ್ನು ಹೊಂದಬೇಕು. ಮಹಿಳೆಯರಿಗೆ ಮತ್ತು ಮಕ್ಕಳಿಗೆ ಯಾವುದೇ ರೀತಿಯ ತೊಂದರೆಯಾದಲ್ಲಿ 1098, 112ಗೆ ಸಂರಕ್ಷಿಸಬಹುದಾಗಿದೆ.

ಬಾಪೂಜಿ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯದ ನಿರ್ದೇಶಕ ಪ್ರೊ.ವೈ.ವೃಷಬೇಂದ್ರಪ್ಪ ಇವರು ಅಧ್ಯಕ್ಷತೆ ವಹಿಸಿದ್ದರು. ಎರಡನೇ ಅಪರ ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಬಾಲ ನ್ಯಾಯ ಮಂಡಳಿಯ ಅಧ್ಯಕ್ಷ ರೇಷ್ಮಾ ಹೆಚ್.ಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ವಾಸಂತಿ ಉಪ್ಪಾರ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿ ಮಹಾವೀರ ಮಾ, ಕರೆಣ್ಣವರ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಅರುಣ್ ಕುಮಾರ್ ಎಲ್.ಹೆಚ್, ಬಾಪೂಜಿ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕಿ ಡಾ. ಲೀಲಾ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!