journalists; ರಾಜ್ಯ ಸಮ್ಮೇಳನದ ಪೂರ್ವಭಾವಿ ಸಿದ್ದತೆಗೆ ಅಧಿಕೃತ ಚಾಲನೆ

ಬೆಂಗಳೂರು, ಆ.26: ಕರ್ನಾಟಕ ಕಾರ್ಯನಿರತ ಪತ್ರಕರ್ತರ (journalists) ಸಂಘದ 38ನೇ ಸಮ್ಮೇಳನ ಪೂರ್ವಭಾವಿ ಸಿದ್ಧತೆಗೆ ಆ.27ರಂದು (ಭಾನುವಾರ) ಬೆಳಿಗ್ಗೆ 9 ಗಂಟೆಗೆ ನಗರದ ಹೋಟೆಲ್ ಅಪೂರ್ವ ಸಭಾಂಗಣದಲ್ಲಿ ಜಿಲ್ಲಾಧ್ಯಕ್ಷ ಇ.ಎಂ.ಮಂಜುನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅಧಿಕೃತ ಚಾಲನೆ ನೀಡಲಾಗುವುದು. ಈ ಹಿನ್ನೆಲೆ ಇಂದು ರಾಜ್ಯ ಸಮ್ಮೇಳನದ ಪೂರ್ವಭಾವಿ ಸಿದ್ದತೆಗೆ ಅಧಿಕೃತ ಚಾಲನೆ ನೀಡಲಾಯಿತು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 38ನೇ ಸಮ್ಮೇಳನ ಈ ಬಾರಿ ನಮ್ಮ ದಾವಣಗೆರೆ ಜಿಲ್ಲೆಗೆ ಸುಮಾರು 30 ವರ್ಷಗಳ ನಂತರ ಸಿಕ್ಕಿದ್ದು, ಈ ವರ್ಷದ ಅಂತ್ಯದೊಳಗೆ ನಾವು ಸಮ್ಮೇಳನವನ್ನು ಅದ್ದೂರಿಯಾಗಿ ಹಾಗೂ ಬಹಳ ಯಶಸ್ವಿಯಾಗಿ ನೆರವೇರಿಸಬೇಕಿದೆ ಎಂದು ಪ್ರಧಾನ ಕಾರ್ಯದರ್ಶಿ ಫಕ್ರುದ್ದೀನ್ ಹೇಳಿದರು.

Free Electricity; ನೇಕಾರರಿಗೆ 10 ಹೆಚ್.ಪಿ ವರೆಗೆ ಉಚಿತ ವಿದ್ಯುತ್ : ಮುಖ್ಯಮಂತ್ರಿ ಸಿದ್ದರಾಮಯ್ಯ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪೂರ್ವಭಾವಿ ಸಿದ್ಧತೆಯ ಕಾರ್ಯಕ್ರಮದ ಉದ್ಘಾಟನೆಯನ್ನು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಅವರು ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ್, ರಾಷ್ಟ್ರೀಯ ಸಮಿತಿ ಸದಸ್ಯ ಎಸ್.ಕೆ.ಒಡೆಯರ್, ರಾಜ್ಯ ಸಮಿತಿ ಸದಸ್ಯ ಕೆ.ಚಂದ್ರಣ್ಣ ಅವರು ಉಪಸ್ಥಿತರಿರುತ್ತಾರೆ.

Leave a Reply

Your email address will not be published. Required fields are marked *

error: Content is protected !!