ದಾವಣಗೆರೆಯಲ್ಲಿ ಜೂ. 14ರಂದು ಕಾಂಗ್ರೆಸ್ ನವಸಂಕಲ್ಪ ಚಿಂತನಾ ಶಿಬಿರ
ದಾವಣಗೆರೆ: ದಾವಣಗೆರೆ ನಗರದಲ್ಲಿ ಜೂನ್ 14ರಂದು ನವಸಂಕಲ್ಪ ಚಿಂತನಾ ಶಿಬಿರ ಹಮ್ಮಿಕೊಳ್ಳಲಾಗುತ್ತಿದೆ ಎಂದು ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹೆಚ್.ಬಿ. ಮಂಜಪ್ಪ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಐಸಿಸಿ ಹಾಗೂ ಕೆಪಿಸಿಸಿ ನವ ಸಂಕಲ್ಪ ಚಿಂತನಾ ಶಿಬಿರವನ್ನು ಆಯೋಜಿಸುವಂತೆ ನಿರ್ದೇಶಿಸಿದ್ದು, ಅದರಂತೆ ದಾವಣಗೆರೆ ನಗರದ ಎಂಬಿಎ ಕಾಲೇಜ್ ಸಭಾಂಗಣದಲ್ಲಿ ನವ ಸಂಕಲ್ಪ ಚಿಂತನಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದರು.
ಜೂನ್ 14ರಂದು ಬೆಳಿಗ್ಗೆ 9.30ಕ್ಕೆ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಈ ಶಿಬಿರಕ್ಕೆ ಚಾಲನೆ ನೀಡಲಿದ್ದಾರೆ. ದಾವಣಗೆರೆ ಜಿಲ್ಲೆಯ ವೀಕ್ಷಕ ಎಂ.ಸಿ. ವೇಣುಗೋಪಾಲ್, ಜಿಲ್ಲಾಧ್ಯಕ್ಷ ಎಚ್.ಬಿ. ಮಂಜಪ್ಪ ಅಧ್ಯಕ್ಷತೆಯಲ್ಲಿ ಶಾಸಕರು ಚಾಲನೆ ನೀಡಲಿದ್ದಾರೆ ಎಂದು ಮಾಹಿತಿ ನೀಡಿದರು.ಮಾಜಿ ರಾಜ್ಯಸಭಾ ಸದಸ್ಯ ಎಲ್. ಹನುಮಂತಪ್ಪ, ಮಾಜಿ ಸ್ಪೀಕರ್ ಬಿ.ಎಲ್. ಶಂಕರ್ ಹಾಗೂ ಕೆಪಿಸಿಸಿ ವಕ್ತಾರ ನಿಕೇತ್ ರಾಜ್ ಮೌರ್ಯ ಭಾಗವಹಿಸುವರು. ಈ ಶಿಬಿರದಲ್ಲಿ ದಾವಣಗೆರೆ ಜಿಲ್ಲೆಗೆ ಸಂಬ0ಧಪಟ್ಟ ಕಾಂಗ್ರೆಸ್ ಪಕ್ಷದ ಹಾಲಿ, ಮಾಜಿ ಜನಪ್ರತಿನಿಧಿಗಳು, ಎಲ್ಲಾ ಘಟಕಗಳ ಅಧ್ಯಕ್ಷರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಭಾಗವಹಿಸಲಿದ್ದು, ಪಕ್ಷದ ಸಂಪನ್ಮೂಲ ವ್ಯಕ್ತಿಗಳು ಸಂಜೆ 5 ರವರೆಗೆ ವಿವಿಧ ವಿಷಯಗಳ ಕುರಿತಂತೆ ಮಾಹಿತಿ ನೀಡುವರು.
ಚಿಂತನಾ ಶಿಬಿರದಲ್ಲಿ ರಾಜಕೀಯ ವ್ಯವಹಾರಗಳ ಅನುಷ್ಠಾನ, ಅರ್ಥಶಾಸ್ತç ಮತ್ತು ಬೆಲೆಯೇರಿಕೆ, ಸಂಘಟನೆ, ರೈತರು ಮತ್ತು ಕೃಷಿಗೆ ಸಂಬ0ಧಿಸಿದ0ತೆ , ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ, ಮಹಿಳಾ ಶಿಕ್ಷಣ ಮತ್ತು ಯುವಕರಿಗೆ ಉದ್ಯೋಗಕ್ಕೆ ಸಂಬ0ಧಿಸಿದ0ತೆ ದಾವಣಗೆರೆ ಜಿಲ್ಲೆಯ ಪಕ್ಷದ ಪದಾಧಿಕಾರಿಗಳ ಜೊತೆ ಮುಕ್ತ ಚರ್ಚೆ ನಡೆಸಿ ಕೆಪಿಸಿಸಿ ಮತ್ತು ಎಐಸಿಸಿಗೆ ವರದಿ ನೀಡಲಿದ್ದಾರೆ ಎಂದು ತಿಳಿಸಿದರು. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ, ಪಕ್ಷವನ್ನು ಇನ್ನಷ್ಟು ಸದೃಢ ಮಾಡುವ ರೀತಿಯಲ್ಲಿ ಎಲ್ಲಾ ಹಂತಗಳಲ್ಲಿ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದರು. ಸುದ್ದಿಗೋಷ್ಠಿಯಲ್ಲಿ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಸಮಿತಿಯ ದಿನೇಶ್ ಕೆ. ಶೆಟ್ಟಿ, ಎ. ನಾಗರಾಜ್, ಗಡಿಗುಡಾಳು ಮಂಜುನಾಥ್, ಅನಿತಾಬಾಯಿ ಮಾಲತೇಶ್, ನಂಜಾನಾಯ್ಕ, ಅಬ್ದುಲ್ ಜಬ್ಬಾರ್, ಲಿಯಾಖತ್ ಅಲಿ, ಹರೀಶ್ ಬಸಾಪುರ, ರಾಜಾಭಕ್ಷಿ, ಮಲ್ಲಿಕಾರ್ಜುನ ಇತರರು ಇದ್ದರು.
garudavoice21@gmail.com 9740365719