Judge: ವೃದ್ದನಿಗೆ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದ ನ್ಯಾ. ಡಿ.ಕೆ.ವೇಲಾ

pdj photo

ದಾವಣಗೆರೆ (Judge) : ದಾವಣಗೆರೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಶನಿವಾರ ಮಧ್ಯಾಹ್ನ ಹರಿಹರ ನ್ಯಾಯಾಲಯಕ್ಕೆ ಆಗಮಿಸಿದ ಸಮಯದಲ್ಲಿ ದೊಡ್ಡಬತಿ ಸಮೀಪದ ಮಂದಾರ ಶಾಲೆಯ ಹತ್ತಿರದ ಮುಖ್ಯರಸ್ತೆಯಲ್ಲಿ ವೃದ್ದರೊಬ್ಬರು ನಿತ್ರಾಣಗೊಂಡು ರಸ್ತೆ ಬದಿಯಲ್ಲೇ ಬಿದ್ದಿದ್ದನ್ನು ಕಂಡು ಅವರನ್ನು ಹರಿಹರದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ ಮಾನವೀತೆ ಮೆರೆದಿದ್ದಾರೆ. ಈ ದೃಶ್ಯವನ್ನು ಕಂಡ ಸಾರ್ವಜನಿಕರು ಸಾಕಷ್ಟು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವೃದ್ದನ ಹೆಸರು ಮತ್ತು ವಿಳಾಸವನ್ನು ವಿಚಾರಿಸಲಾಗಿ ಹರಪನಹಳ್ಳಿ ತಾಲ್ಲೂಕಿನ ತೆಲಗಿ ಗ್ರಾಮದ ಕರಿಯಪ್ಪ ತಂದೆ ಬಸಪ್ಪ ಎಂದು ತಿಳಿದಿದೆ.

ಇತ್ತೀಚಿನ ಸುದ್ದಿಗಳು

error: Content is protected !!