ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಕೆ.ಎಸ್.ಈಶ್ವರಪ್ಪ
ಪುತ್ರನಿಗೆ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ಬೇಸರಗೊಂಡಿರುವ ಕೆಎಸ್ ಈಶ್ವರಪ್ಪನಿನ್ನೆ (ಮಾರ್ಚ್ 15) ಶಿವಮೊಗ್ಗದ ಬಂಜಾರ ಕನ್ವೆನ್ಷನ್ ಹಾಲ್ನಲ್ಲಿ ತಮ್ಮ ಬೆಂಬಲಿಗರ ಸಭೆ ನಡೆಸಿದರು. ಸಭೆಯಲ್ಲಿ ಮುಂದಿನ ನಡೆ ಬಗ್ಗೆ ಮುಖಂಡರ ಅಭಿಪ್ರಾಯ ಸಂಗ್ರಹಿಸಿದರು. ಬಳಿಕ ಮಾತನಾಡಿದ ಈಶ್ವರಪ್ಪ, ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ ಹೋಗುವುದಿಲ್ಲ ಎಂದರು.
ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ಕೆ.ಎಸ್.ಈಶ್ವರಪ್ಪ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯೋದಾಗಿ ಘೋಷಣೆ ಮಾಡಿದ್ದಾರೆ. ಬೆಂಬಲಿಗರ ಅಭಿಪ್ರಾಯ ಸಂಗ್ರಹಣಾ ಸಭೆಯಲ್ಲಿ ಮಾತನಾಡಿರುವ ಈಶ್ವರಪ್ಪ, ನನ್ನ ಪ್ರಾಣ ಹೋದರೂ ಮೋದಿ ವಿರುದ್ಧ ಹೋಗಲ್ಲ. ವಿಶ್ವದ ಬಹುತೇಕ ಎಲ್ಲಾ ರಾಷ್ಟ್ರಗಳು ಮೋದಿ ಆಡಳಿತ ಮೆಚ್ಚಿವೆ.ನನ್ನ ಹೃದಯ ಬಗೆದರೆ, ಒಂದು ಕಡೆ ಮೋದಿ ಇನ್ನೊಂದು ಕಡೆ ರಾಮ ಎಂದಿದ್ದಾರೆ.
ರಾಜ್ಯದಲ್ಲಿ ಇತ್ತೀಚಿಗೆ ಬಿಜೆಪಿಯಲ್ಲಿ ಕಾಂಗ್ರೆಸ್ ಸಂಸ್ಕೃತಿ ಬಂದಿದ್ಯಾ ಎಂದು ನೊಂದು ಹೇಳುತ್ತಿದ್ದೇನೆ. ವಂಶಪಾರಂಪರ್ಯ ಸಂಸ್ಕೃತಿ ಕಂಡುಬರುತ್ತಿದೆ ಎಂದು ಬಿಎಸ್ ಯಡಿಯೂರಪ್ಪ ವಿರುದ್ಧ ಕಿಡಿಕಾರಿದ್ದಾರೆ.