kabaddi; ಒಂದು ಜಿಲ್ಲೆ ಒಂದು ಕ್ರೀಡೆ ಯೋಜನೆಯಡಿ ಕಬಡ್ಡಿಗೆ ಪ್ರಾಧಾನ್ಯತೆ
ದಾವಣಗೆರೆ, ಸೆ.01: ಒಂದು ಜಿಲ್ಲೆ ಒಂದು ಕ್ರೀಡೆ ಯೋಜನೆಯಡಿ ದಾವಣಗೆರೆ ಜಿಲ್ಲೆಯಲ್ಲಿ ಗ್ರಾಮೀಣ ಕ್ರೀಡೆಯಾದ ಕಬಡ್ಡಿಗೆ (kabaddi) ಆದ್ಯತೆ ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ತಿಳಿಸಿದರು.
ಗುರುವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳೊಂದಿಗೆ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಒಂದು ಜಿಲ್ಲೆ ಒಂದು ಕ್ರೀಡೆ ಪ್ರಾರಂಭಿಸಲು ಉದ್ದೇಶಿಸಲಾಗಿದೆ. ಈ ಕ್ರೀಡೆಗೆ ಎಲ್ಲಾ ರೀತಿಯ ಪೂರಕ ವಾತಾವರಣವನ್ನು ನಿರ್ಮಿಸುವ ಮೂಲಕ ಕ್ರೀಡೆಗೆ ಪ್ರೋತ್ಸಾಹ ನೀಡಲು ಉದ್ದೇಶಿಸಲಾಗಿದೆ. ದಾವಣಗೆರೆ ಜಿಲ್ಲೆಯಲ್ಲಿ ಜಿಲ್ಲಾ ಕ್ರೀಡೆಯಾಗಿ ಕಬಡ್ಡಿಗೆ (kabaddi) ಆದ್ಯತೆ ನೀಡಲಾಗುತ್ತಿದೆ. ಈ ಕಬಡ್ಡಿಯನ್ನು ಪ್ರೋತ್ಸಾಹಿಸಲು ಅಗತ್ಯವಿರುವ ಆಟದ ಮೈದಾನ, ಮೂಲಭೂತ ಸೌಕರ್ಯ ಮತ್ತು ಕೋಚ್ ಗಳನ್ನು ನೇಮಕ ಮಾಡಲಾಗುತ್ತದೆ ಎಂದರು.
devaraj urs; ಸಂವಿಧಾನ ವಿರೋಧಿಗಳ ಕೈಗೆ ಅಧಿಕಾರ ನೀಡಿ ಮಕ್ಕಳ ಭವಿಷ್ಯ ಹಾಳು ಮಾಡಬೇಡಿ: ಮುಖ್ಯಮಂತ್ರಿ
ಜಿಲ್ಲಾ ಪಂಚಾಯತ್ ಮುಖ್ಯ ಉಪಕಾರ್ಯದರ್ಶಿ ಕೃಷ್ಣನಾಯ್ಕ್, ಜಿಲ್ಲಾ ಕ್ರೀಡಾ ಅಧಿಕಾರಿ ಹರ್ಷ ಉಪಸ್ಥಿತರಿದ್ದರು.