ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸದ ಜಮೀರ್ ವಿರುದ್ಧ ಕನ್ನಡಿಗರು ಕೆಂಡ
ಬೆಂಗಳೂರು: ರಾಜ್ಯದ ನೂತನ ಸಚಿವರಾಗಿ ಜಮೀರ್ ಅಹ್ಮದ್ ಇಂಗ್ಲಿಷ್‌ನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿರುವುದು ಕನ್ನಡ ಪರ ಹೋರಾಟಗಾರರ ಆಕ್ರೋಶಕ್ಕೆ ಕಾರಣವಾಗಿದೆ.
ಜಮೀರ್ ನಡೆ ಖಂಡಿಸಿ ಟ್ವೀಟ್ ಮಾಡಿರುವ ಕನ್ನಡ ರಕ್ಷಣಾ ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಟಿ.ಎ. ನಾರಾಯಣಗೌಡ, ‘ಕರ್ನಾಟಕ ಸರ್ಕಾರದ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಜಮೀರ್ ಅಹ್ಮದ್ ಖಾನ್ ಅವರು ಇನ್ನೂ ಕನ್ನಡ ಕಲಿಯದಿರುವುದು ನಾಚಿಕೆಗೇಡು.ಎಲ್ಲ ಸಚಿವರೂ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ ಜಮೀರ್ ಅಹಮದ್ ಅವರು ಇಂಗ್ಲಿಷ್‌ನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಕಾರಣಕ್ಕೆ ಬಂದು ಇಷ್ಟು ವರ್ಷಗಳಾದರೂ ಕನ್ನಡ ಕಲಿಯದಿರುವುದು ಎಷ್ಟು ಸರಿ’ ಎಂದು ಪ್ರಶ್ನಿಸಿದ್ದಾರೆ.
ಕರ್ನಾಟಕಕ್ಕೆ ಬರುವ ರಾಷ್ಟ್ರೀಯ ನಾಯಕರೇ ಕನ್ನಡದಲ್ಲಿ ಮಾತನಾಡಲು ಪ್ರಯತ್ನ ಮಾಡುತ್ತಿರುವಾಗ ಈ ನಾಡಿನಲ್ಲೇ ಹುಟ್ಟಿರೋ ಜಮೀರ್ ಅಹ್ಮದ್ ಅವರೇ, ಇಷ್ಟು ವರ್ಷದಿಂದ ಇಲ್ಲೇ ಇದ್ದು ಕರ್ನಾಟಕದಲ್ಲಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡುವುದಿಲ್ಲ. ಅಂದರೆ ನಿಮಗೇನು ಹೇಳೋದು. ಮೊದಲು ಕನ್ನಡ ಮಿಕ್ಕಿದ್ದು ಆಮೇಲೆ. ನಿಮ್ಮ ಈ ನಡೆಗೆ ನಮ್ಮ ವಿರೋಧ ಇದೆ’ ಎಂದು ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಟ್ವೀಟ್ ಮಾಡಿದ್ದಾರೆಮಾಡಿದ್ದಾರೆ.