ಆಂಧ್ರದ ರಾಜ್ಯಪಾಲರಾಗಿ ಕನ್ನಡಿಗ ಅಬ್ದುಲ್ ನಜೀರ್ ಅಧಿಕಾರ ಸ್ವೀಕಾರ
ವಿಜಯವಾಡ: ಆಂಧ್ರಪ್ರದೇಶದ ವಿಜಯವಾಡದ ರಾಜ ಭವನದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಸುಪ್ರೀಂ ಕೋರ್ಟಿನ ನಿವೃತ್ತ ನ್ಯಾಯಮೂರ್ತಿ, ಕನ್ನಡಿಗ ಎಸ್ ಅಬ್ದುಲ್ ನಜೀರ್ ಅವರು ಆಂಧ್ರದ ರಾಜ್ಯಪಾಲರಾಗಿ ಪ್ರಮಾಣವಚನ ಸ್ವೀಕರಿಸಿದರು.
ನಜೀರ್ ಅವರಿಗೆ ಆಂಧ್ರ ಪ್ರದೇಶ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಪ್ರಮಾಣ ವಚನ ಬೋಧಿಸಿದರು.
ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಮತ್ತು ಇತರೆ ಗಣ್ಯರು ಈ ಸಂದರ್ಭದಲ್ಲಿ ಹಾಜರಿದ್ದರು.