ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಶಾಸಕ ಡಾ. ಶಾಮನೂರು ಶಿವಶಂಕರಪ್ಪನವರು ಮತ್ತು ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಅವರ ಪರವಾಗಿ ಕಾಂಗ್ರೆಸ್ ಪಕ್ಷದ ಸ್ಟಾರ್ ಪ್ರಚಾರಕ ಕನ್ನಯ್ಯಕುಮಾರ್ ಅವರು ದಾವಣಗೆರೆ ಜಿಲ್ಲಾ ವಕೀಲರ ಬಳಿ ಮತಯಾಚಿಸಿದರು.
ಇಂದು ಕನ್ನಯ್ಯಾ ಕುಮಾರ್ ಅವರು ಶಾಸಕ ಡಾ. ಶಾಮನೂರು ಶಿವಶಂಕರಪ್ಪನವರೊಂದಿಗೆ ವಕೀಲರ ಸಂಘಕ್ಕೆ ತೆರಳಿ ವಕೀಲರ ಸಂಘದ ಅಧ್ಯಕ್ಷ ಎಲ್.ಹೆಚ್.ಅರುಣಕುಮಾರ್ ಮತ್ತು ಪದಾಧಿಕಾರಿಗಳ ಬಳಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಶಾಸಕ ಡಾ. ಶಾಮನೂರು ಶಿವಶಂಕರಪ್ಪನವರು ಮತ್ತು ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಅವರನ್ನು ಗೆಲ್ಲಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ವಕೀಲರ ಘಟಕದ ಅಧ್ಯಕ್ಷ ಪ್ರಕಾಶ್ ಪಾಟೀಲ್, ಅನಿಷ್ ಪಾಷಾ, ಲೋಕಿಕೆರೆ ಪ್ರದೀಪ್, ಖಾದರ್, ಎನ್.ಎಂ.ಆಂಜನೇಯ, ಆವರಗೆರೆ ಪರಮೇಶ್, ರಾಜನಹಳ್ಳಿ ಸುರೇಶ್, ಚಿತ್ರಲಿಂಗಪ್ಪ, ಶ್ರೀಮತಿ ಸುಷ್ಮಾ ಪಾಟೀಲ್ ಮತ್ತಿತರರಿದ್ದರು.
