Kargil : ಜಿಲ್ಲಾ ಕಾಂಗ್ರೆಸ್‍ನಿಂದ ಜುಲೈ 26ರ ಶನಿವಾರ ಕಾರ್ಗಿಲ್ ವಿಜಯ ದಿವಸ್ : ದಿನೇಶ್ ಕೆ.ಶೆಟ್ಟಿ

ದಾವಣಗೆರೆ: ದಾವಣಗೆರೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಜುಲೈ 26ರ ಶನಿವಾರದಂದು ದಾವಣಗೆರೆಯ ಅಮರ್ ಜವಾನ್ ಉದ್ಯಾನವನದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ತಿಳಿಸಿದ್ದಾರೆ.
ಅಂದು ಸಂಜೆ 05-30 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ.ಮಂಜಪ್ಪನವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ.
ಆದ ಕಾರಣ ದಾವಣಗೆರೆ ಜಿಲ್ಲೆಯ ಸಂಸದರು, ಸಚಿವರು, ಶಾಸಕರುಗಳು, ಮಾಜಿ ಶಾಸಕರುಗಳು, ಕಾಂಗ್ರೆಸ್ ಪಕ್ಷದ ಎಲ್ಲಾ ಜನಪ್ರತಿನಿಧಿಗಳು, ಕೆಪಿಸಿಸಿ ಸದಸ್ಯರು, ಸರ್ಕಾರದಿಂದ ನೇಮಕಗೊಂಡಿರುವ ನಾಮನಿರ್ದೇಶನ ಸದಸ್ಯರುಗಳು, ಗ್ಯಾರಂಟಿ ಯೋಜನೆಯ ಜಿಲ್ಲಾ ಮತ್ತು ತಾಲೂಕು ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಡಿಸಿಸಿ ಬ್ಯಾಂಕ್ ನಿರ್ದೇಶಕರು, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಹಿಂದುಳಿದ, ಅಲ್ಪಸಂಖ್ಯಾತರ, ಅಂಗವಿಕಲರ, ಕಾರ್ಮಿಕರ, ವೈದ್ಯರ, ವಕೀಲರ ವಿಭಾಗಗಳು, ಎನ್.ಎಸ್.ಯು.ಐ., ಯುವ ಘಟಕ, ಮಹಿಳಾ ಘಟಕ, ಜವಾಹರ್ ಬಾಲ್ ಮಂಚ್, ರಾಜೀವ್‍ಗಾಂಧಿ ಪಂಚಾಯತ್ ರಾಜ್, ಬೀದಿಬದಿ ವ್ಯಾಪಾರಸ್ಥರ ವಿಭಾಗ ಹಾಗೂ ಕಾಂಗ್ರೆಸ್ ಪಕ್ಷದ ಎಲ್ಲಾ ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಜಿಲ್ಲಾ / ತಾಲ್ಲೂಕು, ಎಪಿಎಂಸಿ ಮತ್ತು ಮಹಾನಗರ ಪಾಲಿಕೆಯ ಮಾಜಿ ಸದಸ್ಯರು, ಗ್ರಾಮ ಪಂಚಾಯಿತಿ ಹಾಲಿ ಮತ್ತು ಮಾಜಿ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ಪರಿಶಿಷ್ಟ ವಿಭಾಗದ ಜಿಲ್ಲಾಧ್ಯಕ್ಷ ಬಿ.ಹೆಚ್. ವೀರಭದ್ರಪ್ಪ, ಬ್ಲಾಕ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷರುಗಳಾದ ಅಯೂಬ್ ಪೈಲ್ವಾನ್, ಕೆ.ಜಿ.ಶಿವಕುಮಾರ್, ಜಿ.ಸಿ.ನಿಂಗಪ್ಪ ಮತ್ತು ಬಿ.ಕೆ.ಪರಶುರಾಮ್ ಮಾಗಾನಹಳ್ಳಿ ಕೋರಿದ್ದಾರೆ.