ಕಾರ್ಮಿಕ ಇಲಾಖೆಯಿಂದ ಕುಕ್ಕುವಾಡದಲ್ಲಿ ಕಾರ್ಮಿಕರಿಗೆ ದಿನಸಿ ಕಿಟ್ ವಿತರಣೆ

ದಾವಣಗೆರೆ: ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕರ ಸಂಘ (ಎಐಯುಟಿಯುಸಿ) ವತಿಯಿಂದ ತಾಲ್ಲೂಕಿನ ಕುಕ್ಕುವಾಡ ಗ್ರಾಮದಲ್ಲಿ ಕಾರ್ಮಿಕ ಇಲಾಖೆಯಿಂದ ವಿತರಿಸುತ್ತಿರುವ ದಿನಸಿ ಕಿಟ್‌ಗಳ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮಕ್ಕೆ ನಿವೃತ್ತ ಜಿಲ್ಲಾಕಾರ್ಮಿಕ ಅಧಿಕಾರಿ ಸಿ.ಎಚ್ ಹಿರೇಗೌಡರ ಮುಖ್ಯಅತಿಥಿಯಾಗಿ ಪಾಲ್ಗೊಂಡು ಫುಡ್‌ಕಿಟ್‌ಗಳನ್ನು ವಿತರಿಸಿ ಮಾತನಾಡಿ, ಕೊರೋನಾ ಬಿಕ್ಕಟ್ಟಿನ ಕಾಲದಲ್ಲಿ ಬದುಕು ದುಸ್ತರವಾಗಿದ್ದು, ದುಶ್ಚಟಗಳನ್ನು ಕಡಿಮೆ ಮಾಡಿಕೊಳ್ಳಿ, ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ ಎಂದು ಸಲಹೆ ನೀಡಿದರು.
ಕಟ್ಟಡ ಕಾರ್ಮಿರಲ್ಲದವರು ನೋಂದಣಿ ಮಾಡಿಸಿಕೊಳ್ಳುತ್ತಿರುವುದು ಕಂಡುಬರುತ್ತಿದ್ದು, ಇದರಿಂದ ನೈಜ ಕಟ್ಟಡ ಕಾರ್ಮಿಕರಿಗೆ ತೊಂದರೆ ಉಂಟಾಗಲಿದೆ. ನೈಜ ಫಲಾನುಭವಿಗಳು ಮಂಡಳಿಯಲ್ಲಿ ನೋಂದಾವಣಿ ಮಾಡಿಸಿಕೊಂಡು ಸವಲತ್ತುಗಳನ್ನು ಪಡೆಯಬೇಕು ಎಂದು ಕಿವಿ ಮಾತು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಮಂಜುನಾಥ ಕೈದಾಳೆ, ಕಾರ್ಯದರ್ಶಿ ಮಂಜುನಾಥ ಕುಕ್ಕುವಾಡ, ಮುಖಂಡರುಗಳಾದ ಕುಮಾರ, ಶಬ್ಬೀರ್, ಶಂಕರ್, ಅನಿಲ್, ಪುನೀತ್ ಮತ್ತು ಸತೀಶ್ ಸೇರಿದಂತೆ ನೂರಕ್ಕೂ ಹೆಚ್ಚು ಫಲಾನುಭವಿಗಳು ಭಾಗವಹಿಸಿದ್ದರು.