ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಧಾರ್ಮಿಕ ಸ್ಥಳಗಳಲ್ಲಿ ಚುನಾವಣಾ ಪ್ರಚಾರ ನಿಷೇಧ-ಜಿಲ್ಲಾಧಿಕಾರಿ ಶಿವಾನಂದ ಕಾಪಶಿ

ದಾವಣಗೆರೆ : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಶಾಂತಿಯುತವಾಗಿ ಹಾಗೂ ಮುಕ್ತವಾಗಿ ಚುನಾವಣೆ ನಡೆಸುವ ನಿಟ್ಟಿನಲ್ಲಿ ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನ, ಮಠ, ಮಂದಿರ, ಜೈನ ಬಸದಿ, ಮಸೀದಿ, ದರ್ಗಾ ಹಾಗೂ ಇದರ ವ್ಯಾಪ್ತಿಯಲ್ಲಿ ಬರುವ ಸಮುದಾಯ ಭವನ, ಯಾತ್ರಿ ನಿವಾಸ ಪ್ರದೇಶ, ಕಲ್ಯಾಣ ಮಂಟಪ ಭಾಗದ ದೇವಸ್ಥಾನದ ಆವರಣದ ಖಾಲಿ ಜಾಗದ ಪ್ರದೇಶದಲ್ಲಿ ಯಾವುದೇ ರಾಜಕೀಯ ಚಟುವಟಿಕೆಗಳನ್ನು ನಡೆದಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶಿವಾನಂದ ಕಾಪಶಿ ಅವರು ತಿಳಿಸಿದ್ದಾರೆ.
ದೇವಸ್ಥಾನ, ಚರ್ಚ್, ಮಸೀದಿ ಇವುಗಳ ಧ್ವನಿವರ್ಧಕಗಳನ್ನು ರಾಜಕೀಯ ಚಟುವಟಿಕೆಗಳಿಗೆ ಬಳಸುವಂತಿಲ್ಲ. ಚುನಾವಣಾ ಸಂದರ್ಭದಲ್ಲಿ ರಾಜಕೀಯ ವ್ಯಕ್ತಿಗಳು ತಮ್ಮ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಹಾಗೂ ಇತರೆ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಿ, ಆವರಣದಲ್ಲಿ ಸಭೆ ಸಮಾರಂಭ ಇನ್ನಿತರೆ ರಾಜಕೀಯ ಚಟುವಟಿಕೆಗಳನ್ನು ನಡೆಸಲು ಅವಕಾಶ ಇರುವುದಿಲ್ಲ.
ಈ ಮೇಲಿನ ಯಾವುದೇ ಅಂಶಗಳ ಉಲ್ಲಂಘನೆಯಾದಲ್ಲಿ ಧಾರ್ಮಿಕ ಸಂಸ್ಥೆಗಳ(ತಡೆಗಟ್ಟುವಿಕೆ ಅಥವಾ ದುರುಪಯೋಗ) ಕಾಯ್ದೆ 1988ರ ಪ್ರಕಾರ ನಿಯಮಾನುಸಾರ ಸಂಸ್ಥೆಗಳ ಮುಖ್ಯಸ್ಥರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದ್ದಾರೆ.