ವಿಶ್ವ ಕರವೇಯಿಂದ ಜ.2 ರಂದು ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ
ದಾವಣಗೆರೆ: ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಜ.೨ ರ ಇಂದು ಸಂಜೆ ೬ಗಂಟೆಗೆ ಇಲ್ಲಿನ ಶಿವಯೋಗಿ ಮಂದಿರದಲ್ಲಿ ೬೬ ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ಬಾಬುರಾವ್ ತಿಳಿಸಿದರು.
ವಿರಕ್ತಮಠದ ಬಸವಪ್ರಭು ಸ್ವಾಮೀಜಿ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಲಿದ್ದು, ಸಂಸದ ಜಿ.ಎಂ ಸಿದ್ದೇಶ್ವರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕರಾದ ಶಾಮನೂರು ಶಿವಶಂಕರಪ್ಪ ಮತ್ತು ಎಸ್.ಎ. ರವೀಂದ್ರನಾಥ್ ಅವರು ಭುವನೇಶ್ವರಿ ಭಾವಚಿತ್ರವನ್ನು ಅನಾವರಣ ಗೊಳಿಸಲಿದ್ದಾರೆ. ವೇದಿಕೆಯ ರಾಜ್ಯಾಧ್ಯಕ್ಷ ಕೆ.ಜಿ. ಯಲ್ಲಪ್ಪ ಅಧ್ಯಕ್ಷತೆ ವಹಿಸುವರು.
ಶಾಸಕ ಎಸ್.ವಿ ರಾಮಚಂದ್ರಪ್ಪ, ಮೇಯರ್ ಎಸ್.ಟಿ. ವೀರೇಶ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ, ದೂಡಾ ಅಧ್ಯಕ್ಷ ದೇವರಮನಿ ಶಿವಕುಮಾರ್, ವಿಶ್ವ ಚೇತನ ವಿದ್ಯಾ ಸಂಸ್ಥೆಯ ಮುಖ್ಯಸ್ಥರಾದ ಡಾ.ವಿಜಯಲಕ್ಷ್ಮಿ ವೀರಮಾಚಿನೇನಿ, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ, ಬಿಜೆಪಿ ರೈತ ಮೋರ್ಚಾದ ಜಿಲ್ಲಾಧ್ಯಕ್ಷ ನಾಗರಾಜ ಲೋಕಿಕೆರೆ ಸೇರಿದಂತೆ ಮತ್ತಿತರರು ಮುಖ್ಯಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ರಾಜ್ಯೋತ್ಸವದ ಅಂಗವಾಗಿ ಸಾಮಾಜಿಕ, ಮಾಧ್ಯಮ, ಸಂಗೀತ, ಕೈಗಾರಿಕೋದ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಪದಾಧಿಕಾರಿಗಳಾದ ದಯಾನಂದ, ಚಂದ್ರಶೇಖರ್, ರವಿಕುಮಾರ್, ಸುನೀಲ್ ಇದ್ದರು.