ಲೋಕಲ್ ಸುದ್ದಿ

ಕುರಿ,ಮೇಕೆ ಘಟಕಕ್ಕೆ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ ಅರ್ಜಿ ಆಹ್ವಾನ

ಕುರಿ,ಮೇಕೆ ಘಟಕಕ್ಕೆ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ ಅರ್ಜಿ ಆಹ್ವಾನ

ದಾವಣಗೆರೆ : ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ ಜಿಲ್ಲಾ ನಿಗಮದ ವತಿಯಿಂದ ಪ್ರಸಕ್ತ ಸಾಲಿನ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ (6+1) ಕುರಿ,ಮೇಕೆ ಘಟಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ನಿಗಮದಲ್ಲಿ ನೊಂದಾಯಿತರಾದವರು ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ 18-60 ವರ್ಷ ವಯೋಮಿತಿಯ ಮಹಿಳಾ ಸದಸ್ಯರು ಅಥವಾ ಮಹಿಳಾ ಸದಸ್ಯರು ಇಲ್ಲವಾದಲ್ಲಿ ಪುರುಷ ಸದಸ್ಯರು ಅರ್ಜಿ ಸಲ್ಲಿಸಬಹುದು. ಈ ಹಿಂದೆ ಸಹಾಯಧನ ಪಡೆದಿರುವ ಫಲಾನುಭವಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ.

ಆಸಕ್ತರು ನಿಗದಿತ ಅರ್ಜಿಗಳನ್ನು ಆಯಾ ತಾಲೂಕು ಮಟ್ಟದ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಸಹಾಯಕ ನಿರ್ದೇಶಕರು/ಮುಖ್ಯ ಪಶುವೈದ್ಯಾಧಿಕಾರಿ(ಆಡಳಿತ) ಗಳಿಂದ ಪಡೆದು ಭರ್ತಿ ಮಾಡಲಾದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಇಲಾಖೆಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜುಲೈ 25 ಕೊನೆಯ ದಿನವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಸೇವಾ ಇಲಾಖೆ ತಾಲ್ಲೂಕು ಮುಖ್ಯ ಪಶುವೈದ್ಯಾಧಿಕಾರಿಗಳು (ಆಡಳಿತ) ಪಶು ಆಸ್ಪತ್ರೆ, ಸಂಪರ್ಕಿಸಲು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದ ಸಹಾಯಕ ನಿರ್ದೇಶಕರಾದ ಸಂತೋಷ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

Most Popular

To Top