ಕರ್ನಾಟಕ ರಾಜ್ಯ ಕೃಷಿ ಪರಿಕರಗಳ ಮಾರಾಟಗಾರರ ಸಂಘ ಸ್ಥಾಪನೆ: ರಾಜ್ಯಾಧ್ಯಕ್ಷರಾಗಿ ನಾಗರಾಜ್ ಲೋಕಿಕೆರೆ ಅವಿರೋಧ ಆಯ್ಕೆ

ದಾವಣಗೆರೆ : ಕರ್ನಾಟಕ ರಾಜ್ಯ ಕೃಷಿ ಪರಿಕರಗಳ ಮಾರಾಟಗಾರರ ಸಂಘವು ನೂತನವಾಗಿ ಅಸ್ತಿತ್ವಕ್ಕೆ ಬಂದಿದ್ದು, ಸಂಘದ ರಾಜ್ಯಾಧ್ಯಕ್ಷರಾಗಿ ಕೆ.ಹೆಚ್. ನಾಗರಾಜ್ ಲೋಕಿಕೆರೆ ಸೇರಿದಂತೆ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನಗರದ ಖಾಸಗಿ ಹೋಟೆಲ್ ನಲ್ಲಿ ನಡೆದ ಕೃಷಿ ಪರಿಕರಗಳ ಮಾರಾಟಗಾರರ ರಾಜ್ಯ ಮಟ್ಟದ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದ್ದು, ಪ್ರಧಾನ ಕಾರ್ಯದರ್ಶಿಯಾಗಿ ಟಿ.ಎಂ. ಉಪಮಾತಯ್ಯ, ಖಜಾಂಚಿಯಾಗಿ ಆರ್.ಜಿ. ಶ್ರೀನಿವಾಸಮೂರ್ತಿ, ಸಹ ಕಾರ್ಯದರ್ಶಿಗಳಾಗಿ ಅಶೋಕ ಗಾಣೇಗೆರ್ (ಬಾಗಲಕೋಟೆ), ರಾಜು ತೋಟಪ್ಪ (ಹಾವೇರಿ), ಎ.ಬಿ. ಸೋಮಶೇಖರ್ (ದಾವಣಗೆರೆ), ಸಲಹಾ ಮಂಡಳಿ ಸದಸ್ಯರಾಗಿ ಎ. ಲಕ್ಷ್ಮಿ ನಾರಾಯಣ ಶೆಟ್ಟಿ ಆಯ್ಕೆಯಾಗಿದ್ದಾರೆ.
ಕೃಷಿ ಪರಿಕರಗಳ ಮಾರಾಟಗಾರರು ಎದುರಿಸುತ್ತಿರುವ ಹಲವಾರು ಸಮಸ್ಯೆಗಳ ಕುರಿತಂತೆ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆದ ನಂತರ ಈ ಸಮಸ್ಯೆಗಳನ್ನು ಸರ್ಕಾರದೊಂದಿಗೆ ಚರ್ಚಿಸಿ, ಬಗೆಹರಿಸಿಕೊಳ್ಳುವ ನಿಟ್ಟಿನಲ್ಲಿ ಸಂಘವನ್ನು ಅಸ್ತಿತ್ವಕ್ಕೆ ತರಲಾಯಿತು ಎಂದು ಟಿ.ಎಂ. ಉಮಾಪತಯ್ಯ ತಿಳಿಸಿದ್ದಾರೆ.

 
                         
                       
                       
                       
                       
                       
                       
                      