ಪುನೀತ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ರಾಜ್ಯಪಾಲರು, ಸಿಎಂ ಹಾಗೂ ಗೃಹ ಸಚಿವ

ಬೆಂಗಳೂರು:ಇಂದು ಬೆಳಿಗ್ಗೆ ಕರ್ನಾಟಕದ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ನಿನ್ನೆ ನಿಧನರಾದ ಪ್ರಖ್ಯಾತ ಕಲಾವಿದ ಪುನೀತ್ ರಾಜಕುಮಾರ್ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.
ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತಿತರರು ಜೊತೆಗಿದ್ದರು.
ಪ್ರಖ್ಯಾತ ನಟ ಪುನೀತ್ ರಾಜಕುಮಾರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿರುವ ಕಂಠೀರವ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿಗಳು ಪುನೀತ್ ರಾಜಕುಮಾರ್ ಸಹೋದರ ರಾಘವೇಂದ್ರ ರಾಜಕುಮಾರ್ ಅವರೊಂದಿಗೆ ಅಂತಿಮ ವಿಧಿವಿಧಾನಗಳ ಕುರಿತು ಸಮಾಲೋಚನೆ ನಡೆಸಿದರು.
ಪುನೀತ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ರಾಜ್ಯಪಾಲರು, ಸಿಎಂ ಹಾಗೂ ಗೃಹ ಸಚಿವ