10.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ದಾವಣಗೆರೆ: ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ, ಉತ್ತರ ಕನ್ನಡ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಕೊಡಗು, ಸೋಮವಾರಪೇಟೆ, ಸಕಲೇಶಪುರ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಚಾಮರಾಜನಗರ, ಧಾರವಾಡ, ಹಾವೇರಿ, ವಿಜಯಪುರ, ಕಲಬುರ್ಗಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಇವತ್ತಿನಿಂದ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.
ಈಗಿನಂತೆ ಇನ್ನೆರಡು ದಿನಗಳಲ್ಲಿ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಹ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.
ಚಂಡಮಾರುತ : ಈಗಾಗಲೇ ಅಂಡಮಾನ್ ಹಾಗೂ ಶ್ರೀಲಂಕಾ ಮಧ್ಯೆ ವಾಯುಭಾರ ಕುಸಿತ ಉಂಟಾಗಿದ್ದು ನಾಳೆ ರಾತ್ರಿ, ನಾಡಿದ್ದು ಚಂಡಮಾರುತವಾಗಿ ಪರಿವರ್ತನೆಗೊಳ್ಳವ ಸಾಧ್ಯತೆ ಇದೆ.
ಉತ್ತರಕ್ಕೆ ಸಾಗುವ ಚಂಡಮಾರುತವು ಮೇ 13ಕ್ಕೆ ಮ್ಯಾನ್ಮಾರ್ ಗೆ ಅಪ್ಪಳಿಸುವ ಲಕ್ಷಣಗಳಿವೆ.