31.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

31.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ದಾವಣಗೆರೆ :ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಾದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಮಳೆಯ ಮುನ್ಸೂಚನೆ ಇದೆ. ಉಡುಪಿ ಕರಾವಳಿಯ ಅಲ್ಲಲ್ಲಿ ಈಗಾಗಲೇ ಮಳೆಯಾಗುತ್ತಿದ್ದು, ಉತ್ತರ ಕನ್ನಡ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಕೊಡಗು, ಹಾಸನ, ಮೈಸೂರು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ, ಕೋಲಾರ, ಬೆಂಗಳೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಚಾಮರಾಜನಗರ ಒಂದೆರಡು ಕಡೆ, ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ ಜಿಲ್ಲೆಗಳ ಹೆಚ್ಚಿನ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇಲ್ಲದಿದ್ದರೂ ತಾಪಮಾನ ಏರಿಕೆಯಿಂದ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. ಗಾಳಿಯ ಬಗ್ಗೆ ಎಚ್ಚರವಿರಲಿ.

ಮುಂಗಾರು ಸ್ಥಿತಿ : ಅರಬ್ಬಿ ಸಮುದ್ರದಲ್ಲಿ ಇದ್ದಕ್ಕಿದ್ದಂತೆ ಮುಂಗಾರಿಗೆ ಪೂರಕವಾದ ಗಾಳಿಯ ಚಟುವಟಿಕೆಗಳು ಸಮರ್ಪಕವಾಗಿ ಇಲ್ಲದಿರುವುದು ಈಗಿನ ಪೂರ್ವದ ಮಳೆಗೆ ಅನುಕೂಲವಾಗಿದೆ.

ಇದರಿಂದ ಮುಂಗಾರು ತಡವಾಗುವ ಆತಂಕವಿದೆ.  ಈಗಿನ ಪ್ರಕಾರ ಜೂನ್ 5ರ ಅಂದಾಜು ಅರಬ್ಬಿ ಸಮುದ್ರದಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ.

ಈ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದಂತೆ ಮುಂಗಾರು ಚುರುಕಾಗುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *

error: Content is protected !!