27.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

ಕರ್ನಾಟಕ: ಕಾಸರಗೋಡು ಸೇರಿದಂತೆ ರಾಜ್ಯದ ದಕ್ಷಿಣ ಕರಾವಳಿ ಜಿಲ್ಲೆಗಳಾದ್ಯಂತ ಸಾಮಾನ್ಯ ಮಳೆಯ ಹವಾಮಾನ ಮುನ್ಸೂಚನೆ ಇದೆ (Karnataka Weather Forecast)
ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಬೆಂಗಳೂರು, ತುಮಕೂರು, ಕಲಬುರ್ಗಿ, ಬೀದರ್ ಭಾಗಗಳಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮುಂಗಾರು ರಾಜ್ಯದ ಕರಾವಳಿಗೆ ಹಾಗೂ ಮಹಾರಾಷ್ಟ್ರ, ಗುಜರಾತ್, ಮಧ್ಯಪ್ರದೇಶ, ಒರಿಸ್ಸಾ ರಾಜ್ಯಗಳಿಗೆ ಸೀಮಿತಗೊಂಡಿದ್ದು. ಜುಲೈ 1ರಿಂದ ಕರ್ನಾಟಕದ ಒಳನಾಡು ಭಾಗಗಳಲ್ಲಿ ಸಹ ಅಲ್ಲಲ್ಲಿ ಉತ್ತಮ ಮುಂಗಾರು ಮಳೆಯ ಮುನ್ಸೂಚನೆ ಇದೆ. ಮುಂಗಾರು ತಡವಾದರೂ ಉತ್ತಮ ಮಳೆಯ ಮುನ್ಸೂಚನೆ ಇದೆ
ಮುಂಗಾರು ಮಳೆ