14.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

Karnataka weather forecast till 8 am on 14.03.2023

14.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

ದಾವಣಗೆರೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಸಂಜೆ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಸಂಜೆ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
ಉತ್ತರ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು,
ಮೈಸೂರು, ಹಾಸನ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣ ಸಾಧ್ಯತೆ ಇದೆ.
ಈಗನ ಮುನ್ಸೂಚನೆಯಂತೆ ಮಾರ್ಚ್ 14ರಂದು ಸಹ ಸಂಜೆ ಕರಾವಳಿ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದ್ದು ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಮಾರ್ಚ್ 15 ಹಾಗೂ 16ರಂದು ರಾಜ್ಯದ ಬಹುತೇಕ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೊಡಗು, ಮೂಡಿಗೆರೆ, ಶಿೃಂಗೇರಿ, ಕುದುರೆಮುಖ, ತೀರ್ಥಹಳ್ಳಿ, ಆಗುಂಬೆ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!