police; ಮೂವರು ಪೊಲೀಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ

ಬೆಂಗಳೂರು, ಆಗಸ್ಟ್ 17: ರಾಜ್ಯದ ವಿವಿಧ ಪೊಲೀಸ್ (police) ಠಾಣೆಗಳ ಐವರು ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ರಾಜ್ಯ ಸರ್ಕಾರವು ವರ್ಗಾವಣೆ (Transfer) ಮಾಡಿ ಆದೇಶ ಹೊರಡಿಸಿದೆ.
1. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಸಂಚಾರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗೇಶ್ ಜಿ. ಎನ್ ಅವರನ್ನು ಬೆಂಗಳೂರಿನ ಕಾಮಾಕ್ಷಿ ಪಾಳ್ಯದ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ.
2. ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಜಯ್ ಸಾರಥಿ ಎಂಬುವವರನ್ನು ಬೆಂಗಳೂರು ನಗರದ ಯಶವಂತಪುರ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ.
ಹರಿಹರ ಆಸ್ಪತ್ರೆಗೆ ಜನಪ್ರಿಯ ಶಾಸಕರ ಧೀಡಿರ್ ಭೇಟಿ
3. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮನೋಜ್ ಕುಮಾರ್ ಎಂಬುವವರನ್ನು ಮೈಸೂರು ಜಿಲ್ಲೆಯ ಬನ್ನೂರು ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ.
4. ಸಿ.ಐ.ಡಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪುನೀತ್ ಬಿ.ಎನ್ ಅವರಿಗೆ ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ಮಾಡಿದ್ದ ವರ್ಗಾವಣೆಯನ್ನು ರದ್ದುಪಡಿಸಲಾಗಿದೆ.
5. ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಧನಂಜಯ ಅವರಿಗೆ ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಗೆ ಮಾಡಿದ್ದ ವರ್ಗಾವಣೆಯನ್ನು ರದ್ದುಪಡಿಸಲಾಗಿದೆ.