ಕರುನಾಡಿನ ನಟಿಮಣಿಯರನ್ನ ಹುಡುಕುವ ಮಹಾನಟಿ ಕಾರ್ಯಕ್ರಮ

ನಟಿಯಾಗುವ ಕನಸಿಗೆ ನೀರೆರೆಯಲಿದೆ ಮಹಾನಟಿ ಕಾರ್ಯಕ್ರಮ, ತನ್ನ ವಿಭಿನ್ನ ರಿಯಾಲಿಟಿ ಶೋಗಳ ಮೂಲಕ ಸಾಕಷ್ಟು ಯುವ ಪ್ರತಿಭೆಗಳನ್ನ ಕರುನಾಡಿಗೆ ಪರಿಚಯಿಸಿರುವ ಜೀ ಕನ್ನಡ ವಾಹಿನಿ, ಈ ಬಾರಿ ಮತ್ತೊಂದು ಹೊಸ ರಿಯಾಲಿಟಿ ಶೋ ಮೂಲಕ ಕರುನಾಡಿನ ಯುವ ನಾಯಕನಟಿಯರನ್ನ ಹುಡುಕುವ ಕೆಲಸ ಶುರುಮಾಡಿದೆ.
ಜೀ ವಾಹಿನಿಯ ಜನಪ್ರಿಯ ರಿಯಾಲಿಟಿ ಶೋಗಳಾದ ಡ್ರಾಮಾ ಜೂನಿಯರ್ಸ್‌,ಕಾಮಿಡಿ ಕಿಲಾಡಿಗಳು,ಡಿಕೆಡಿ ಮತ್ತು ಸರಿಗಮಪ ಮೂಲಕ ಈಗಾಗಲೆ ಸಾಕಷ್ಟು ನಟನಟಿಯರು ,ಗಾಯಕ ಗಾಯಕಿಯರು ಹಾಗು ಕೊರಿಯೋಗ್ರಾಫರ್‌ಗಳನ್ನ ಕರುನಾಡಿಗೆ ಕೊಟ್ಟಿರುವ ಜೀ ಕನ್ನಡ ವಾಹಿನಿ ಇದೀಗ ಮಹಾನಟಿ ಎಂಬ ಹೊಚ್ಚ ಹೊಸ ರಿಯಾಲಿಟಿ ಶೋ ಮೂಲಕ ನಿಮ್ಮೂರಿನಲ್ಲಿರುವ ನಟಿಯಾಗುವ ಕನಸು ಹೊತ್ತಿರುವ, ಅವಕಾಶ ವಂಚಿತ ಪ್ರತಿಭೆಗಳಿಗೆ ವೇದಿಕೆ ಒದಗಿಸಲು ಈ ಕಾರ್ಯಕ್ರಮವನ್ನ ಹೆಣೆದ್ದಿದ್ದು, ಈ ಮೂಲಕ ಕನ್ನಡ ಚಿತ್ರರಂಗಕ್ಕೆ ಯುವ ನಾಯಕ ನಟಿಯರನ್ನ ನೀಡುವ ಕೆಲಸವನ್ನ ಈ ರಿಯಾಲಿಟಿ ಶೋ ಮಾಡಲಿದೆ.
ಕರುನಾಡಿನ ಧೀಮಂತ ನಾಯಕ ನಟಿಯರ ಸಾಲಿಗೆ ಸೇರಲು ಬಯಸುವ ಎಲ್ಲಾ ಯುವ ನಾಯಕ ನಟಿಯರಿಗೆ ವೇದಿಕೆ ಕಲ್ಪಿಸಿಕೊಡುವ ಈ ಮಹಾನಟಿ ಕಾರ್ಯಕ್ರಮವು ,ನಿಮ್ಮ ಕನಸನ್ನ ನನಸು ಮಾಡುವ ನಿಟ್ಟಿನಲ್ಲಿ ನಿಮ್ಮೂರಿಗೆ ಬಂದು, ನಿಮ್ಮ ಪ್ರತಿಭಯೆನ್ನ ಗುರುತಿಸಿ, ನಿಮ್ಮನ್ನ ಈ ವೇದಿಕೆ ಕರೆತರುವ ಕೆಲಸವನ್ನ ಈ ಮೂಲಕ ಮಾಡಲಿದೆ.
ಮಹಾನಟಿ ಎಂಬ ಈ ರಿಯಾಲಿಟಿ ಶೋಗಾಗಿ ಕರ್ನಾಟಕದ ಆಯ್ದ ಜಿಲ್ಲೆಗಳಲ್ಲಿ ಆಡಿಷನ್‌ ಪ್ರಕ್ರಿಯೆ ನಡೆಸಲ್ಲಿದ್ದು ,ಇದರ ಆರಂಭಿಕ ಹಂತವೆಂಬಂತೆ ಇದೇ ಶನಿವಾರ ,17-02-2024 ರಂದು ಬೆಳಿಗ್ಗೆ 9 ಗಂಟೆಗೆ ಸೆಂಟ್ ಜಾನ್ ಇಂಗ್ಲೀಷ್ ಮೀಡಿಯಂ ಸ್ಕೂಲ್,ಶಿವಕುಮಾರ ಸ್ವಾಮಿ ಬಡಾವಣೆ,ಹೆಚ್.ಆರ್.ಬಿ. ಲೇಔಟ್, ದಾವಣಗೆರೆ. ಇಲ್ಲಿ ಆಡಿಷನ್ಸ್‌ ನಡೆಯಲ್ಲಿದ್ದು ಈ ಪ್ರಕ್ರಿಯೆಯಲ್ಲಿ ಭಾಗವಹಿಸಲು ಇಚ್ಚಿಸುವವರು 2 ಪಾಸ್‌ ಪೋರ್ಟ್‌ ಸೈಜ್‌ ಪೋಟೋ ಜೊತೆ ಅಡ್ರಸ್‌ ಪ್ರೂಫ್‌ ಜೆರಾಕ್ಸ್‌ ತೆಗೆದುಕೊಂಡು ಬಂದು ಭಾಗವಹಿಸಬಹುದಾಗಿದ್ದು, ಜೀ ಕನ್ನಡ ನಡೆಸುವ ಈ ಆಡಿಷನ್‌ ಪ್ರಕ್ರಿಯೆಯಲ್ಲಿ ಯಾವುದೇ ಹಣವನ್ನ ಪಡೆಯಲಾಗುವುದಿಲ್ಲವೆಂದು ವಾಹಿನಿ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!