kea; ಒಂದೇ ಸಂದರ್ಭದಲ್ಲಿ 2 ಪರೀಕ್ಷೆಗಳಿದ್ದರೆ ಒಂದೇ ಪರೀಕ್ಷೆ ಬರೆಯಿರಿ: ಕೆಇಎ
ಬೆಂಗಳೂರು, ಅ.24: ಒಂದೇ ಅವಧಿಯಲ್ಲಿ ಎರಡುಇಎ ಪ್ರತ್ಯೇಕ ಜಿಲ್ಲೆಗಳಲ್ಲಿ ಅಥವಾ ಪ್ರತ್ಯೇಕ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಪ್ರವೇಶ ಪತ್ರ ಡೌನ್‌ಲೋಡ್ ಆಗಿದ್ದರೆ, ಯಾವುದಾದರು ಒಂದು ಪರೀಕ್ಷೆ ಬರೆದು ಎರಡೂ ಪ್ರವೇಶ ಪತ್ರಗಳನ್ನು ಕೊಠಡಿಯ ಮೇಲ್ವಿಚಾರಕರಿಗೆ ಕಡ್ಡಾಯವಾಗಿ ಸಲ್ಲಿಸಬೇಕು ಎಂದು ಕೆಇಎ (KEA)ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಸ್ಪಷ್ಟಪಡಿಸಿದ್ದಾರೆ.
ವಿವಿಧ 5 ನಿಗಮ ಮಂಡಳಿಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸುವಾಗ ಅನೇಕ ಮಂದಿ ಒಂದಕ್ಕಿಂತ ಹೆಚ್ಚು ಅರ್ಜಿ ಸಲ್ಲಿಸಿರುವ ಕಾರಣ ಅವರಿಗೆ ಪ್ರತ್ಯೇಕ ಸ್ಥಳಗಳಲ್ಲಿ ಪರೀಕ್ಷಾ ಕೇಂದ್ರ ಹಂಚಿಕೆಯಾಗಿದೆ.
ಅಭ್ಯರ್ಥಿಗಳು ತಮ್ಮ ಒಂದೊಂದು ಅರ್ಜಿಯಲ್ಲೂ ಒಂದೊಂದು ರೀತಿ ಹೆಸರುಗಳನ್ನು ಬರೆದಿದ್ದಾರೆ. ಹಾಗೆಯೇ ಪ್ರತ್ಯೇಕ ಪರೀಕ್ಷಾ ಕೇಂದ್ರಗಳನ್ನು ಉಲ್ಲೇಖಿಸಿರುವುದು ಇಷ್ಟೆಲ್ಲ ಗೊಂದಲಗಳಿಗೆ ಕಾರಣವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
bjp; ನಾನು ಕೂಡ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ: ಎಂ.ಪಿ ರೇಣುಕಾಚಾರ್ಯ
ಒಂದಕ್ಕಿಂತ ಹೆಚ್ಚು ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಒಂದಕ್ಕಿಂತ ಹೆಚ್ಚು ಪ್ರವೇಶ ಪತ್ರಗಳು ಡೌನ್‌ಲೋಡ್ ಆಗಿವೆ. ಕೆಲವರಿಗೆ ಅ.28 ಮತ್ತು 29 ಈ ಎರಡೂ ದಿನಾಂಕಗಳಂದು ಎರಡು ಪ್ರತ್ಯೇಕ ಜಿಲ್ಲೆಗಳಲ್ಲಿ ಪರೀಕ್ಷಾ ಕೇಂದ್ರಗಳಿದ್ದು, ಅಂತಹವರು ಎರಡೂ ಕಡೆ ಪರೀಕ್ಷೆ ಬರೆಯಬೇಕು.
ಆದರೆ, ಒಂದೇ ಅವಧಿಯಲ್ಲಿ ಎರಡು ಪ್ರತ್ಯೇಕ ಜಿಲ್ಲೆಗಳಲ್ಲಿ ಅಥವಾ ಪ್ರತ್ಯೇಕ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಪ್ರವೇಶ ಪತ್ರ ಡೌನ್‌ಲೋಡ್ ಆಗಿದ್ದರೆ, ಯಾವುದಾದರು ಒಂದು ಪರೀಕ್ಷೆ ಬರೆದು ಎರಡೂ ಪ್ರವೇಶ ಪತ್ರಗಳನ್ನು ಕೊಠಡಿಯ ಮೇಲ್ವಿಚಾರಕರಿಗೆ ಕಡ್ಡಾಯವಾಗಿ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.