ಫೆ.26ರಂದು ನಗರಕ್ಕೆ ಕೇಜ್ರಿವಾಲ್

ಕೇಜ್ರಿವಾಲ್
ದಾವಣಗೆರೆ : ಆಮ್ ಆದ್ಮಿ ಪಕ್ಷದ ರಾಷ್ಟ್ರಾಧ್ಯಕ್ಷ ಅರವಿಂದ ಕೇಜ್ರಿವಾಲ್ ಇದೇ ಫೆ.26ರಂದು ದಾವಣಗೆರೆಗೆ ಆಗಮಿಸಲಿದ್ದಾರೆ ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ಡಾ.ವಿಶ್ವನಾಥ್ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಅಂದು ನಗರದಲ್ಲಿ ರಾಜ್ಯ ಮಟ್ಟದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕೇಜ್ರಿವಾಲ್ ಭಾಗವಹಿಸಲಿದ್ದಾರೆ ನಂತರ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಾಗುವುದು ಎಂದರು. ರಾಜ್ಯದ 224 ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುತ್ತಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಕಾರ್ಯಾಧ್ಯಕ್ಷ ಜಾಫರ್ ಮೋಹಿಯುದ್ದೀನ್, ಜಿಲ್ಲಾಧ್ಯಕ್ಷ ಚಂದ್ರು ಬಸವಂತಪ್ಪ, ಗಣೇಶ್ ದುರ್ಗದ, ಧರ್ಮಾನಾಯ್ಕ, ಸುರೇಶ್, ರವೀಂದ್ರನಾಥ್, ಪ್ರಶಾಂತ್ ಉಪಸ್ಥಿತರಿದ್ದರು.